100 ಮೀಟರ್ ಮತ್ತು 200 ಮೀಟರ್ ವಿಭಾಗದಲ್ಲಿ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿರುವ ದೂತಿ ಚಂದ್ ಪದಕದ ಆಸೆ ಚಿಗುರಿಸಿದ್ದಾರೆ. ಪ್ರತಿದಿನ ಕನಿಷ್ಠ 6ರಿಂದ 7 ಗಂಟೆಗಳ ಕಾಲ ಕಠಿಣ ಅಭ್ಯಾಸ ನಡೆಸುತ್ತಿದ್ದೇನೆ. ಈ ಬಾರಿ ಉತ್ತಮ ಸಾಧನೆ ಮಾಡುವ ವಿಶ್ವಾಸವಿದೆ, ಅದಕ್ಕಾಗಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಿದ್ಧತೆಗಳನ್ನು ನಡೆಸುತ್ತಿದ್ದೇನೆ ಎಂದು ದೂತಿ ಚಂದ್ ಸುದ್ಧಿ ಸಂಸ್ಥೆ ಎ.ಎನ್.ಐಗೆ ಹೇಳಿದ್ದಾರೆ. ರಿಯೊ ಒಲಿಂಪಿಕ್ಸ್ ನಲ್ಲಿಯೂ ದುತಿ ಚಂದ್ ದೇಶವನ್ನು ಪ್ರತಿನಿಧಿಸಿದ್ದರು.
ದೂತಿ ಚಂದ್ ಸೇರಿದಂತೆ ನಮ್ಮ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಕ್ರೀಡಾ ಸಚಿವ ಕಿರೆನ್ ರಿಜಿಜು ಹೇಳಿದ್ದಾರೆ.