Saturday, October 17, 2026
Saturday, October 17, 2026

ಐಸಿಸಿ ಚ್ಯಾಂಪಿಯನ್ಸ್ ಟ್ರೋಫಿ: ಭಾರತ ಫೈನಲ್ ಗೆ; ‘ವಿರಾಟ್’ ದರ್ಶನ ಪಡೆದು ಆಸ್ಟ್ರೇಲಿಯಾ ಮನೆಗೆ

ಐಸಿಸಿ ಚ್ಯಾಂಪಿಯನ್ಸ್ ಟ್ರೋಫಿ: ಭಾರತ ಫೈನಲ್ ಗೆ; ‘ವಿರಾಟ್’ ದರ್ಶನ ಪಡೆದು ಆಸ್ಟ್ರೇಲಿಯಾ ಮನೆಗೆ

Date:

ದುಬೈ, ಮಾ.4: ಮಂಗಳವಾರ ಆಸ್ಟ್ರೇಲಿಯಾ ವಿರುದ್ದ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ನಲ್ಲಿ ಭಾರತ 4 ವಿಕೆಟ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ಫೈನಲ್ ತಲುಪಿದೆ. ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡಕ್ಕೆ ನಾಯಕ ಸ್ಟೀವ್ ಸ್ಮಿತ್ 73 ರನ್ ಗಳಿಸಿ ಆಧರಿಸಿದರು. ಅಲೆಕ್ಸ್ ಕ್ಯಾರಿ 61 ರನ್ ಗಳಿಸಿದರು. ಮಹಮ್ಮದ್ ಶಮಿ 3 ವಿಕೆಟ್ ಪಡೆದರೆ, ಮಿಸ್ಟರಿ ಸ್ಪಿನ್ನರ್ ಖ್ಯಾತಿಯ ವರುಣ್ ಚಕ್ರವರ್ತಿ 2, ರವೀಂದ್ರ ಜಡೇಜಾ 2 ವಿಕೆಟ್ ಪಡೆದರು.

ಆಸ್ಟ್ರೇಲಿಯಾ ನೀಡಿದ 265 ರ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ನಾಯಕ ರೋಹಿತ್ ಶರ್ಮಾ ಸ್ಪೋಟಕ ಆರಂಭ ಒದಗಿಸಿದರು. ಕೆಲವೇ ನಿಮಿಷಗಳಲ್ಲಿ ನಾಯಕ ರೋಹಿತ್ 28 ರನ್ ಗಳಿಸಿ ಔಟ್ ಆದರು. ನಂತರ ಆಗಮಿಸಿದ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಆಟದೊಂದಿಗೆ 84 ರನ್ ಗಳಿಸಿ ಶತಕ ವಂಚಿತರಾದರು. ಪಂದ್ಯಶ್ರೇಷ್ಠ ಪ್ರಶಸ್ತಿಗೆ ಕೊಹ್ಲಿ ಭಾಜನರಾದರು.

ಗುರಿಯನ್ನು ತಲುಪಲು ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ ಶ್ರೇಯಸ್ ಐಯ್ಯರ್, ಅಕ್ಷರ್ ಪಟೇಲ್ ಇಂಧನ ಒದಗಿಸಿದರು. 48.1 ಓವರಿನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಎಸೆತವನ್ನು ಸಿಕ್ಸರ್ ಗೆ ಬಾರಿಸಿದ ರಾಹುಲ್, ಭಾರತ ತಂಡವನ್ನು ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಗೆ ಕರೆದೊಯ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!