Friday, September 4, 2026
Friday, September 4, 2026

ಟಿ20 ವಿಶ್ವಕಪ್ ಫೈನಲ್‌ಗೆ ಭಾರತ

ಟಿ20 ವಿಶ್ವಕಪ್ ಫೈನಲ್‌ಗೆ ಭಾರತ

Date:

ಮುಂಬಯಿ, ಮಾ.6: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು 7 ರನ್‌ಗಳಿಂದ ಸೋಲಿಸುವ ಮೂಲಕ ಭಾರತ ಫೈನಲ್‌ಗೆ ಲಗ್ಗೆಯಿಟ್ಟಿತು. 254 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 246 ರನ್ ಗಳಿಸಿತು. ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 7 ವಿಕೆಟ್‌ಗೆ 253 ರನ್ ಗಳಿಸಿತು. ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 89 ರನ್ ಗಳಿಸಿದರೆ, ಶಿವಂ ದುಬೆ ಆತಿಥೇಯರ ಪರ 43 ರನ್‌ಗಳ ಕೊಡುಗೆ ನೀಡಿದರು. ಜಾಕೋಬ್ ಬೆಥೆಲ್ 48 ಎಸೆತಗಳಲ್ಲಿ 105 ರನ್ ಗಳಿಸಿದರು. ಸಂಜು ಸ್ಯಾಮ್ಸನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!