Saturday, September 26, 2026
Saturday, September 26, 2026

ಭಾರತಕ್ಕೆ ಟಿ20 ವಿಶ್ವಕಪ್ ಕಿರೀಟ

ಭಾರತಕ್ಕೆ ಟಿ20 ವಿಶ್ವಕಪ್ ಕಿರೀಟ

Date:

ಅಹಮದಾಬಾದ್, ಮಾ.8: ಇಲ್ಲಿಯ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಟಿ20 ವಿಶ್ವಕಪ್ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 96 ರನ್ ಗಳ ಅಭೂತಪೂರ್ವ ಅಭೂತಪೂರ್ವ ಗೆಲುವನ್ನು ಸಾಧಿಸಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲ ವಿಕೆಟಿಗೆ ಸಂಜು ಸ್ಯಾಮ್ಸನ್ ಅಭಿಷೇಕ್ ಶರ್ಮಾ ಜೋಡಿ 98 ರನ್ ಗಳ ಜತೆಯಾಟ ನೀಡಿತು. ಸಂಜು 46 ಎಸೆತಗಳಲ್ಲಿ 8 ಸಿಕ್ಸರ್ ಮತ್ತು 5 ಬೌಂಡರಿ ಒಳಗೊಂಡ 89 ರನ್ ಬಾರಿಸಿದರೆ, ಶರ್ಮಾ 21 ಎಸೆತಗಳಲ್ಲಿ 52 ರನ್ ಹೊಡೆದರು. ಇಶಾನ್ ಕಿಶನ್ ಅಬ್ಬರದ ಆಟ ಆಡುತ್ತಾ 25 ಎಸೆತಗಳಲ್ಲಿ 54 ರನ್ ಗಳಿಸಿದರು. ಕೊನೆಯ ಓವರ್ ನಲ್ಲಿ ಅಬ್ಬರಿಸಿದ ಶಿವಂ ದುಬೆ 8 ಎಸೆತಗಳಲ್ಲಿ ಅಜೇಯ 26 ರನ್ ಗಳಿಸಿದರು. 20 ಓವರ್ ಗಳಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 255 ರನ್ ಗಳಿಸಿತು.

ಬೃಹತ್ ಗುರಿಯನ್ನು ಚೇಸ್ ಮಾಡಲು ಆರಂಭಿಸಿದ ನ್ಯೂಜಿಲೆಂಡ್ ತಂಡಕ್ಕೆ ಅಕ್ಷರ್ ಪಟೇಲ್ ಮೊದಲ ಆಘಾತ ನೀಡಿದರು. ಟಿಮ್ ಸಿಫರ್ಟ್ 26 ಎಸೆತಗಳಲ್ಲಿ 52 ರನ್ ಗಳಿಸಿ ವರುಣ್ ಚಕ್ರವರ್ತಿ ಎಸೆತದಲ್ಲಿ ನಿರ್ಗಮಿಸಿದರು.

ಜಸ್ಪ್ರೀತ್ ಬುಮ್ರಾ ಅಮೋಘ ಬೌಲಿಂಗ್ ನಡೆಸಿ 4 ಓವರ್ ಗಳಲ್ಲಿ ಕೇವಲ 15 ರನ್ ನೀಡಿ 4 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ನ್ಯೂಜಿಲೆಂಡ್ 19 ಓವರ್ ಗಳಲ್ಲಿ 159 ರನ್ ಗಳಿಗೆ ಸರ್ವಪತನವಾಯಿತು. 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!