Tuesday, September 8, 2026
Tuesday, September 8, 2026

ವಿಶ್ವಕಪ್: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಅಭೂತಪೂರ್ವ ಗೆಲುವು

ವಿಶ್ವಕಪ್: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಅಭೂತಪೂರ್ವ ಗೆಲುವು

Date:

ಅಹ್ಮದಾಬಾದ್, ಅ.14: (ಉಡುಪಿ ಬುಲೆಟಿನ್ ವರದಿ) ಇಲ್ಲಿಯ ನರೇಂದ್ರ ಮೋದಿ ಸ್ಟೇಡಿಯಮ್ ನಲ್ಲಿ ಶನಿವಾರ ನಡೆದ ಭಾರತ-ಪಾಕಿಸ್ತಾನ ಹೈ ವೋಲ್ಟೆಜ್ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆ ಪಾಕಿಸ್ತಾನದ ವಿರುದ್ಧ 7 ವಿಕೆಟ್ ಗಳ ಅಭೂತಪೂರ್ವ ಗೆಲುವನ್ನು ಸಾಧಿಸಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಭಾರತ, ಪಾಕಿಸ್ತಾನದ ಆರಂಭಿಕ ಆಟಗಾರರನ್ನು ತಕ್ಕ ಮಟ್ಟಿಗೆ ನಿಯಂತ್ರಿಸುವಲ್ಲಿ ಯಶಸ್ಸು ಕಂಡಿತು. ಪಾಕಿಸ್ತಾನಕ್ಕೆ ಮಹಮ್ಮದ್ ಸಿರಾಜ್ ಮೊದಲ ಆಘಾತ ನೀಡಿದರು. ನಾಯಕ ಬಾಬರ್ ಆಜಮ್ ಅರ್ಧ ಶತಕ ಸಿಡಿಸಿ ತಂಡವನ್ನು ಆಧರಿಸಿದರು. ಮಹಮ್ಮದ್ ರಿಜ್ವಾನ್ 49 ರನ್ ಗೆ ಔಟಾದರು. ಒಂದು ಹಂತದಲ್ಲಿ ಉತ್ತಮ ಸ್ಥಿತಿಯಲ್ಲಿದ್ದ ಪಾಕಿಸ್ತಾನ ದಿಢೀರನೆ ಕುಸಿತ ಕಂಡಿತು. 154 ಕ್ಕೆ 2 ವಿಕೆಟ್ ಕಳೆದುಕೊಂಡ ಪಾಕಿಸ್ತಾನ, 42.5 ಓವರ್ ಗಳಲ್ಲಿ 191ಕ್ಕೆ ಆಲ್ ಔಟ್ ಆಗಿ ಭಾರತಕ್ಕೆ ಸುಲಭದ ಗುರಿ ನೀಡಿತು. ಬುಮ್ರಾ, ಸಿರಾಜ್, ಪಾಂಡ್ಯ, ಕುಲದೀಪ್, ಜಡೇಜಾ ತಲಾ 2 ವಿಕೆಟ್ ಪಡೆದರು.

ಸುಲಭದ ಗುರಿಯನ್ನು ಬೆನ್ನತ್ತಿದ್ದ ಭಾರತ, ನಾಯಕ ರೋಹಿತ್ ಶರ್ಮಾರವರ ಅಮೋಘ ಬ್ಯಾಟಿಂಗ್ ಸಹಾಯದಿಂದ ಉತ್ತಮ ರನ್ ರೇಟ್ ಕಾಯ್ದುಕೊಳ್ಳುವಲ್ಲಿ ಯಶಸ್ಸು ಕಂಡಿತು. ರೋಹಿತ್ ಶರ್ಮಾ 63 ಎಸೆತಗಳಲ್ಲಿ ತಲಾ 6 ಸಿಕ್ಸ್ ಮತ್ತು ಬೌಂಡರಿ ಮೂಲಕ 86 ರನ್ ಸಿಡಿಸಿ ಔಟಾದರು. ರೋಹಿತ್ ಶರ್ಮಾಗೆ ಸಾಥ್ ನೀಡಿದ ಶ್ರೇಯಸ್ ಐಯ್ಯರ್ ಅಜೇಯ 53 ರನ್ ಸಿಡಿಸಿ ಗೆಲುವಿನ ರನ್ ಬಾರಿಸಿದರು. 30.3 ಓವರ್ ಗಳಲ್ಲಿ ಗೆಲುವಿನ ದಡ ಸೇರಿದ ಭಾರತ, ವಿಶ್ವಕಪ್ ನಲ್ಲಿ ಗೆಲುವಿನ ದಿಗ್ವಿಜಯ ಯಾತ್ರೆ ಮುಂದುವರಿಸಿದೆ.

ಬುಮ್ರಾ ಪಂದ್ಯಶ್ರೇಷ್ಠ: 7-1-19-2 ಮೂಲಕ 2.7 ಎಕನಾಮಿ ರೇಟ್ ಮೂಲಕ ಆಕರ್ಷಕ ಬೌಲಿಂಗ್ ನಡೆಸಿದ ಜಸ್ಪ್ರೀತ್ ಬುಮ್ರಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!