Saturday, March 28, 2026
Saturday, March 28, 2026

ಟಿ20 ವಿಶ್ವಕಪ್: ‘ಸಂಜು ಮ್ಯಾಜಿಕ್’ ಭರ್ಜರಿ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶಿಸಿದ ಭಾರತ

ಟಿ20 ವಿಶ್ವಕಪ್: ‘ಸಂಜು ಮ್ಯಾಜಿಕ್’ ಭರ್ಜರಿ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶಿಸಿದ ಭಾರತ

Date:

ಕೋಲ್ಕತಾ, ಮಾ.1: ಭಾನುವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ನಡೆದ ಟಿ20 ವಿಶ್ವಕಪ್ ಸೂಪರ್ 8 ರ ಮಹತ್ವದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 5 ವಿಕೆಟ್ ಗಳ ಭರ್ಜರಿ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ಭಾರತ ವೆಸ್ಟ್ ಇಂಡೀಸ್ ತಂಡವನ್ನು ಅಲ್ಪಮೊತ್ತಕ್ಕೆ ಸೀಮಿತಗೊಳಿಸಲು ತಕ್ಕ ಮಟ್ಟಿಗೆ ವಿಫಲವಾಯಿತು. 20 ಓವರ್ ಗಳಲ್ಲಿ ವಿಂಡೀಸ್ 4 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು. ಬುಮ್ರಾ 2 ವಿಕೆಟ್ ಪಡೆದರು.

ರನ್ ಚೇಸ್ ಮಾಡಲು ಆರಂಭಿಸಿದ ಭಾರತ ತಂಡಕ್ಕೆ ಸಂಜು ಸ್ಯಾಮ್ಸನ್ ಆಧಾರವಾಗಿ ನಿಂತರು. ಸ್ಪೋಟಕ ಆಟ ಪ್ರದರ್ಶಿಸಿದ ಸ್ಯಾಮ್ಸನ್ ವಿಂಡೀಸ್ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿದರು. ೧೯.೨ ಓವರ್ ಗಳಲ್ಲಿ ಭಾರತ ಗೆಲುವಿನ ದಡ ಸೇರಿತು. ಅಂತಿಮ ಓವರ್ ಗಳಲ್ಲಿ 7 ರನ್ ಗಳ ಅವಶ್ಯಕತೆಯಿದ್ದಾಗ ಸಂಜು ಮೊದಲ ಎಸೆತವನ್ನು ಸಿಕ್ಸರ್ ಗೆ ಅಟ್ಟಿದರು. ಎರಡನೆಯ ಎಸೆತವನ್ನು ಬೌಂಡರಿಗೆ ಹೊಡೆಯುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಅಮೋಘ ಆಟ ಪ್ರದರ್ಶಿಸಿದ ಸಂಜು ಸ್ಯಾಮ್ಸನ್ (97*) ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾದರು. 

ಮಾರ್ಚ್ 4 ರಂದು ನಡೆಯುವ ಸೆಮಿಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಮಾರ್ಚ್ 5 ರಂದು ಭಾರತ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಲಬಾರ್ ವಿಶ್ವರಂಗ ಪುರಸ್ಕಾರ

ಉಡುಪಿ, ಮಾ.28: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಮತ್ತು ಮಲಬಾರ್ ಗೋಲ್ಡ್ ಅಂಡ್...

ಇಂಧನ ಬೆಲೆ ಏರಿಕೆ ಇಲ್ಲ; ಲಾಕ್‌ಡೌನ್ ವದಂತಿಗಳನ್ನು ತಳ್ಳಿ ಹಾಕಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ, ಮಾ.27: ಪೆಟ್ರೋಲ್, ಡೀಸೆಲ್ ಮತ್ತು ವಿಮಾನಯಾನ ಟರ್ಬೈನ್ ಇಂಧನ (ಎಟಿಎಫ್)...
error: Content is protected !!