Sunday, October 18, 2026
Sunday, October 18, 2026

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು

Date:

ಚೆನ್ನೈ, ಫೆ.26: ಇಲ್ಲಿಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ನ ಸೂಪರ್ 8 ಪಂದ್ಯದಲ್ಲಿ ಭಾರತ ಜಿಂಬಾಬ್ವೆ ವಿರುದ್ಧ 72 ರನ್ ಗಳಿಂದ ಗೆಲುವನ್ನು ಸಾಧಿಸಿತು. ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಉತ್ತಮ ಆಟವನ್ನಾಡುತ್ತಾ ಭದ್ರ ಬುನಾದಿ ಒದಗಿಸಿದರು. ಕಳೆದ ಎಲ್ಲಾ ಪಂದ್ಯಗಳಲ್ಲಿಯೂ ಫಾರ್ಮ್ ಕಂಡುಕೊಳ್ಳಲು ಎಡವಿದ ಅಭಿಷೇಕ್ ಇಂದಿನ ಪಂದ್ಯದಲ್ಲಿ ತನ್ನ ಎಂದಿನ ಶೈಲಿಯ ಸ್ಪೋಟಕ ಆಟ ಪ್ರದರ್ಶಿಸಿದರು. ತಲಾ 4 ಸಿಕ್ಸ್ ಮತ್ತು ಬೌಂಡರಿ ಒಳಗೊಂಡ 55 ರನ್ ಬಾರಿಸಿದರು. ಹಾರ್ದಿಕ್ ಪಾಂಡ್ಯ ಅಜೇಯ 50 ರನ್ ಬಾರಿಸಿದರು. ತಿಲಕ್ ವರ್ಮಾ ಅಜೇಯ 44 ರನ್ ಗಳಿಸಿ ತಂಡ ದೊಡ್ಡ ಮೊತ್ತ ಕಲೆ ಹಾಕುವಲ್ಲಿ ಸಹಕರಿಸಿದರು. 20 ಓವರ್ ಗಳಲ್ಲಿ ಭಾರತ ತಂಡ 4 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿತು.

ಬೃಹತ್ ಮೊತ್ತ ಚೇಸ್ ಮಾಡಲು ಗುರಿ ಇಟ್ಟ ಜಿಂಬಾಬ್ವೆ ತಂಡಕ್ಕೆ ಆರಂಭಿಕ ಆಟಗಾರ ಬ್ರಾನ್ ಬೆನೆಟ್ ಉತ್ತಮ ಆಟ ಪ್ರದರ್ಶಿಸಿದರು. 44 ರನ್ ಆಗುವಷ್ಟರಲ್ಲಿ ಮೊದಲ ವಿಕೆಟ್ ಪತನವಾಯಿತು. ಎರಡನೆಯ ವಿಕೆಟ್ 72 ಗೆ ಪತನವಾದರೂ ಮೂರನೇ ವಿಕೆಟ್ ಪತನವಾಗಿದ್ದು 144 ರನ್ ಗೆ.

ನಾಯಕ ಸಿಕಂದರ್ ರಾಜಾ ಉತ್ತಮ ಆಟ ಪ್ರದರ್ಶಿಸಿ 31 ರನ್ ಗೆ ಅರ್ಷದೀಪ್ ಸಿಂಗ್ ಎಸೆತದಲ್ಲಿ ಅಭಿಷೇಕ್ ಶರ್ಮಾಗೆ ಕ್ಯಾಚ್ ಒಪ್ಪಿಸಿದರು. ಅರ್ಷದೀಪ್ ಸಿಂಗ್ ಒಂದೇ ಓವರ್ ನಲ್ಲಿ ಎರಡು ಪ್ರಮುಖ ವಿಕೆಟ್ ಪಡೆದು ಜಿಂಬಾಬ್ವೆಗೆ ಗೆಲುವು ಮತ್ತಷ್ಟು ಕಠಿಣವಾಗಿಸಿದರು. ಅರ್ಷದೀಪ್ 3 ವಿಕೆಟ್ ಪಡೆದು ಉತ್ತಮ ಪ್ರದರ್ಶನ ನೀಡಿದರು. ಜಿಂಬಾಬ್ವೆ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 184 ರನ್ ಕಲೆ ಹಾಕಿತು. ಹಾರ್ದಿಕ್ ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!