Monday, September 28, 2026
Monday, September 28, 2026

ಲಂಕೆಯಲ್ಲಿ ಸೂರ್ಯ ಪಡೆಯ ಸಿಂಹ ಘರ್ಜನೆಗೆ ಬೆದರಿದ ಪಾಕಿಸ್ತಾನ

ಲಂಕೆಯಲ್ಲಿ ಸೂರ್ಯ ಪಡೆಯ ಸಿಂಹ ಘರ್ಜನೆಗೆ ಬೆದರಿದ ಪಾಕಿಸ್ತಾನ

Date:

ಯು.ಬಿ.ಎನ್.ಡಿ., ಫೆ.15: ಭಾನುವಾರ ಶ್ರೀಲಂಕಾದಲ್ಲಿ ನಡೆದ ಪಾಕಿಸ್ತಾನದ ವಿರುದ್ಧದ ಟಿ20 ವಿಶ್ವಕಪ್ ಹೈವೋಲ್ಟೆಜ್ ಪಂದ್ಯದಲ್ಲಿ ಭಾರತ 61 ರನ್ನುಗಳ ಅಭೂತಪೂರ್ವ ಗೆಲುವನ್ನು ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಆರಂಭಿಕ ಆಟಗಾರ ಇಶಾನ್ ಕಿಶನ್ ಸ್ಪೋಟಕ ಆರಂಭ ಒದಗಿಸಿದರು. ಕೇವಲ 40 ಎಸೆತಗಳಲ್ಲಿ 77 ರನ್ ಗಳಿಸಿದರು. ಸ್ಪಿನ್ ಬೌಲರ್ ಗಳನ್ನೇ ಇಳಿಸಿದ ಪಾಕಿಸ್ತಾನದ ರಣತಂತ್ರವನ್ನು ಸಮರ್ಥವಾಗಿ ಸೂರ್ಯಕುಮಾರ್ ಯಾದವ್ ಶಿವಂ ದುಬೆ ಎದುರಿಸಿದರು. 20 ಓವರ್ ಗಳಲ್ಲಿ ಭಾರತ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.

ಆರಂಭಿಕ ಓವರ್ ನಲ್ಲಿ ಹಾರ್ದಿಕ್ ಪಾಂಡ್ಯ ಪಾಕಿಸ್ತಾನಕ್ಕೆ ಮೊದಲ ಆಘಾತ ನೀಡಿದರು. ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಹಾರ್ದಿಕ್ ಪಾಂಡ್ಯ, ಬುಮ್ರಾ ತಲಾ 2 ವಿಕೆಟ್ ಪಡೆದರು. 34 ರನ್ ಆಗುವಷ್ಟರಲ್ಲಿ ಪಾಕಿಸ್ತಾನ 4 ವಿಕೆಟ್ ಕಳೆದುಕೊಂಡು ಸೋಲಿನ ದವಡೆಯಲ್ಲಿ ಪ್ರವೇಶಿಸಲು ಸಜ್ಜಾಗಿತ್ತು. ಅಂತಿಮವಾಗಿ ಪಾಕಿಸ್ತಾನ 114 ರನ್ನುಗಳಿಗೆ ಸರ್ವಪತನವಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!