Home ಸುದ್ಧಿಗಳು ಕ್ರೀಡೆ ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

539
0

ಢಾಕಾ: ಢಾಕಾದಲ್ಲಿ ನಡೆದ ಪುರುಷರ ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ರೌಂಡ್-ರಾಬಿನ್ ಹಣಾಹಣಿಯಲ್ಲಿ ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 3-1 ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಜಾಹೀರಾತು

ಹರ್ಮನ್‌ಪ್ರೀತ್ ಸಿಂಗ್ ಮತ್ತು ಆಕಾಶದೀಪ್ ಸಿಂಗ್ ಆಕರ್ಷಕ ಗೋಲುಗಳನ್ನು ಗಳಿಸಿ ಭಾರತದ ಗೆಲುವಿಗೆ ಭದ್ರ ಬುನಾದಿ ಹಾಕಿಕೊಟ್ಟರು.

ಪಾಕಿಸ್ತಾನದ ವಿರುದ್ಧ ಭಾರತ ಇಲ್ಲಿಯವರೆಗೆ ಆಡಿದ 12 ಪಂದ್ಯಗಳಲ್ಲಿ 11ರಲ್ಲಿ ಜಯಗಳಿಸಿದೆ, ಉಳಿದ ಒಂದು ಪಂದ್ಯ ಡ್ರಾ ಆಗಿದೆ.

ಇಂದಿನ ಗೆಲುವಿನೊಂದಿಗೆ ಭಾರತ ಈಗ ನಡೆಯುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಎರಡು ಪಂದ್ಯಗಳಲ್ಲಿ ಗೆಲುವನ್ನು ದಾಖಲಿಸಿದ್ದು ಒಂದು ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.