Tuesday, October 20, 2026
Tuesday, October 20, 2026

ಜಸ್ಪ್ರೀತ್ ಬುಮ್ರಾಗೆ 2024 ರ ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿ

ಜಸ್ಪ್ರೀತ್ ಬುಮ್ರಾಗೆ 2024 ರ ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿ

Date:

ನವದೆಹಲಿ, ಜ.28: ಜಸ್ಪ್ರೀತ್ ಬುಮ್ರಾ 2024 ರ ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದು, ಸರ್ ಗಾರ್ಫೀಲ್ಡ್ ಸೋಬರ್ಸ್ ಟ್ರೋಫಿಯನ್ನು ಗೆದ್ದಿದ್ದಾರೆ. ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮಂಗಳವಾರ ಪ್ರಕಟಿಸಿದ ಪ್ರತಿಷ್ಠಿತ ಪುರುಷರ ವರ್ಷದ ಕ್ರಿಕೆಟಿಗನಿಗೆ ನೀಡುವ ಸರ್ ಗಾರ್ಫೀಲ್ಡ್ ಸೋಬರ್ಸ್ ಟ್ರೋಫಿಯನ್ನು ನೀಡಿ ಗೌರವಿಸಲಾಗಿದೆ. 2024 ರಲ್ಲಿ ವೇಗಿ ಅದ್ಭುತ ಪ್ರದರ್ಶನ ನೀಡಿದ್ದರು, ಅವರು ಆಡಿದ ಪ್ರತಿಯೊಂದು ಪಂದ್ಯದಲ್ಲೂ ಪ್ರಾಬಲ್ಯ ಸಾಧಿಸಿದ್ದರು. ಟ್ರಾವಿಸ್ ಹೆಡ್, ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ಅವರನ್ನು ಹಿಂದಿಕ್ಕಿ ಈ ಪ್ರಶಸ್ತಿಯನ್ನು ಬುಮ್ರಾ ಗೆದ್ದಿದ್ದಾರೆ. ರಾಹುಲ್ ದ್ರಾವಿಡ್ (2004), ಸಚಿನ್ ತೆಂಡೂಲ್ಕರ್ (2010), ರವಿಚಂದ್ರನ್ ಅಶ್ವಿನ್ (2016) ಮತ್ತು ವಿರಾಟ್ ಕೊಹ್ಲಿ (2017, 2018) ನಂತರ ಭಾರತದಿಂದ ಈ ಪ್ರಶಸ್ತಿಯನ್ನು ಪಡೆದ ಐದನೇ ವ್ಯಕ್ತಿ ಎಂಬ ದಾಖಲೆಯನ್ನು ಬುಮ್ರಾ ನಿರ್ಮಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!