ಮೆಲ್ಬೋರ್ನ್: ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ರಾಫೆಲ್ ನಡಾಲ್ ಡೇನಿಯಲ್ ಮೆಡ್ವೆಡೆವ್ ಅವರನ್ನು ಸೋಲಿಸಿ ದಾಖಲೆಯ 21 ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.
ಮೆಲ್ಬೋರ್ನ್‌ನ ರಾಡ್ ಲೇವರ್ ಅರೆನಾದಲ್ಲಿ ಇಂದು ನಡೆದ ಪಂದ್ಯದಲ್ಲಿ ಆರನೇ ಶ್ರೇಯಾಂಕದ ನಡಾಲ್ ಅವರು ವಿಶ್ವದ ನಂ.2 ಆಟಗಾರ ಮೆಡ್ವೆಡೆವ್ ವಿರುದ್ಧ 2-6, 6-7, 6-4, 6-4, 7-5 ಸೆಟ್‌ಗಳ ರೋಚಕ ಗೆಲುವಿನೊಂದಿಗೆ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಪಡೆದರು.
ಎರಡು ಸೆಟ್‌ಗಳ ನಂತರ ಫೀನಿಕ್ಸ್ ನಂತೆ ಎದ್ದು ಬಂದ ನಡಾಲ್ ಪಂದ್ಯದ ದಿಕ್ಕನ್ನೇ ಬದಲಿಸಿದರು. ಈ ಗೆಲುವಿನೊಂದಿಗೆ ನಡಾಲ್ 21 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಮೊದಲ ಆಟಗಾರ ಎಂಬ ಇತಿಹಾಸ ನಿರ್ಮಿಸಿದರು.




By
ForthFocus™