ಅಹಮದಾಬಾದ್, ಅ.3: ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಸರಣಿಯ ಮೊದಲ ಟೆಸ್ಟ್‌ನ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳಿಗೆ 448 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದೆ. ಧ್ರುವ್ ಜುರೆಲ್, ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಅವರ ಶತಕಗಳ ನೆರವಿನಿಂದ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ 286 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿತು. ಶುಕ್ರವಾರ ಸಂಜೆ ಎರಡನೆಯ ದಿನದಾಟದ ಅಂತ್ಯಕ್ಕೆ ಜಡೇಜಾ 104 ಮತ್ತು ವಾಷಿಂಗ್ಟನ್ ಸುಂದರ್ 9 ರನ್ ಗಳಿಸಿ ಅಜೇಯರಾಗಿದ್ದಾರೆ. ಜುರೆಲ್ 125 ಮತ್ತು ರಾಹುಲ್ 100 ರನ್ ಗಳಿಸಿದರು. ಇದಕ್ಕೂ ಮೊದಲು, ವೆಸ್ಟ್ ಇಂಡೀಸ್ ಗುರುವಾರ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 162 ರನ್‌ಗಳಿಗೆ ಆಲೌಟ್ ಆಯಿತು.
ಒಂದೇ ದಿನ ಮೂರು ಶತಕ; ಬೃಹತ್ ಮೊತ್ತದತ್ತ ಟೀಂ ಇಂಡಿಯಾ ಚಿತ್ತ
ಒಂದೇ ದಿನ ಮೂರು ಶತಕ; ಬೃಹತ್ ಮೊತ್ತದತ್ತ ಟೀಂ ಇಂಡಿಯಾ ಚಿತ್ತ
Date:




By
ForthFocus™