Monday, September 7, 2026
Monday, September 7, 2026

ಟೋಕಿಯೊ ಒಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ ಖಾತರಿಪಡಿಸಿದ ಲೋವ್ಲಿನಾ

ಟೋಕಿಯೊ ಒಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ ಖಾತರಿಪಡಿಸಿದ ಲೋವ್ಲಿನಾ

Date:

ಟೋಕಿಯೊ: ಇಂದು ನಡೆದ ಟೋಕಿಯೊ ಒಲಿಂಪಿಕ್ಸ್ ಮಹಿಳಾ ಬಾಕ್ಸಿಂಗ್ ವೆಲ್ಟರ್ವೈಟ್ (64-69 ಕೆಜಿ) ಕ್ವಾರ್ಟರ್ ಫೈನಲ್ ನಲ್ಲಿ ಭಾರತದ ಲೋವ್ಲಿನಾ ಬೊರ್ಗೊಹೈನ್ ಚೈನೀಸ್ ತೈಪೆಯ ಚಿನ್-ಚೆನ್ ನಿಯೆನ್ ವಿರುದ್ಧ 4-1 ಅಂತರದಿಂದ ಜಯಗಳಿಸಿ ಪದಕದ ಆಸೆಯನ್ನು ಚಿಗುರಿಸಿದ್ದಾರೆ.

ಒಲಿಂಪಿಕ್ಸ್ ಬಾಕ್ಸಿಂಗ್ ನಲ್ಲಿ ಸೆಮಿಫೈನಲ್ ನಲ್ಲಿ ಪರಾಭವಗೊಂಡರೂ ಉಭಯ ಬಾಕ್ಸರ್ ಗಳಿಗೂ ಕಂಚಿನ ಪದಕ ಸಿಗಲಿರುವುದರಿಂದ ಭಾರತಕ್ಕೆ ಮತ್ತೊಂದು ಪದಕ ಸಿಗುವುದು ಖಾತರಿಯಾಗಿದೆ. ತನ್ಮೂಲಕ 2008ರಲ್ಲಿ ವಿಜೇಂದರ್ ಸಿಂಗ್, 2012 ರಲ್ಲಿ ಮೇರಿ ಕೊಮ್ ಬಳಿಕ ಇದೀಗ ಬಾಕ್ಸಿಂಗ್ ನಲ್ಲಿ 23ರ ಹರೆಯದ ಲೋವ್ಲಿನಾಗೆ ಪದಕ ಸಿಗಲಿದೆ.

ಕ್ವಾರ್ಟರ್ ಫೈನಲ್ ನಲ್ಲಿ ಲೋವ್ಲಿನಾ ಗೆದ್ದ ನಂತರ ಆಕೆಯ ಹುಟ್ಟೂರು ಅಸ್ಸಾಮ್ ರಾಜ್ಯದ ಗೋಲಾಘಟ್ ನಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!