Tuesday, September 8, 2026
Tuesday, September 8, 2026

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಹೊಂಗನಸು ವಿಶೇಷ ಕಾರ್ಯಕ್ರಮ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಹೊಂಗನಸು ವಿಶೇಷ ಕಾರ್ಯಕ್ರಮ

Date:

ಬೆಳ್ಮಣ್, ಡಿ.2: ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ ಪರಿಹರಿಸುವವನೇ ನಿಜವಾದ ನಾಯಕ, ನಾಯಕತ್ವ ಕೇವಲ ಒಂದು ಹುದ್ದೆಯಲ್ಲ ಅದೊಂದು ಜವಾಬ್ದಾರಿ. ಎಲ್ಲರನ್ನೂ ಸೇರಿಸಿಕೊಂಡು ಮುನ್ನಡೆಯಬಲ್ಲ ಚಾಣಾಕ್ಷನೇ ನಿಜವಾದ ನಾಯಕ ಎಂಬುದನ್ನು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನಮಗೆ ಕಲಿಸಿಕೊಟ್ಟಿದೆ ಎಂದು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಮಾಜಿ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಮನದಾಳದ ಮಾತುಗಳ ಮೂಲಕ ಹೇಳಿದರು. ಪ್ರತಿ ಬಾರಿ ಹೊಸತನದ ಯೋಜನೆ ಹಾಗೂ ಹೊಸ ಕಾರ್ಯಕ್ರಮಗಳ ಮೂಲಕ ಸಂಘಟನೆಯನ್ನು ಬೆಳೆಸಬಲ್ಲ ವ್ಯಕ್ತಿಯೇ ನಿಜವಾದ ನಾಯಕ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಎನ್ನುವುದು ಜನಸಾಮಾನ್ಯರ ಸಂಘ ಇಲ್ಲಿ ಎಲ್ಲರಿಗೂ ಮುಕ್ತ ಅವಕಾಶಗಳ ತೆರೆದಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸದಸ್ಯರಾದ ಹರಿಣಿ ಪೂಜಾರಿ ಮನದಾಳದ ಮಾತುಗಳ ಮೂಲಕ ಹೇಳಿದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಆದಿತ್ಯವಾರ ಜರಗಿದ 26ನೇ ವರ್ಷದ ವರ್ಷಾಚರಣೆಯ ಪ್ರಯುಕ್ತ ಜರಗಿದ ‘ಹೊಂಗನಸು’ ವಿಶೇಷ ಕಾರ್ಯಕ್ರಮದಲ್ಲಿ ಮನದಾಳದ ಮಾತು ಮೂಲಕ ಮಾತನಾಡಿದರು. ಸಂಘದ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟಪೂರ್ವಾಧ್ಯಕ್ಷ ದಿನೇಶ್ ಪೂಜಾರಿ ಬೀರೊಟ್ಟು, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್ ಮೊದಲಾದವರು ವೇದಿಕೆಯಲ್ಲಿದ್ದರು.

ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸರಬೈಲು, ರಾಜೇಶ್ ಕೋಟ್ಯಾನ್, ಪ್ರಶಾಂತ್ ಪೂಜಾರಿ, ಕೋಶಾಧಿಕಾರಿ ಪ್ರದೀಪ್ ಸುವರ್ಣ, ಸದಸ್ಯರಾದ ಲಲಿತಾ ಆಚಾರ್ಯ, ಲೀಲಾ ಪೂಜಾರಿ, ಪದ್ಮಶ್ರೀ ಪೂಜಾರಿ, ವೀಣಾ ಪೂಜಾರಿ, ಪುಷ್ಪ ಕುಲಾಲ್, ಹರೀಶ್ ಗೋಳಿಕಟ್ಟೆ, ಹರಿಣಾಕ್ಷಿ ಪೂಜಾರಿ, ಅನ್ನಪೂರ್ಣ ಕಾಮತ್, ಶಾಂತರಾಮ್ ಕುಲಾಲ್, ಯೋಗೀಶ್ ಆಚಾರ್ಯ, ಸುಭಾಸ್ ಕೆಮ್ಮಣ್ಣು, ಕಿರಣ್ ಪೂಜಾರಿ, ಶ್ರೀಕಾಂತ್ ಆಚಾರ್ಯ, ಅಭಿಷೇಕ್ ಕುಲಾಲ್, ಅವಿನಾಶ್ ಪೂಜಾರಿ, ಯಶವಂತ್ ಕುಲಾಲ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!