ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಸುಬ್ರಹ್ಮಣ್ಯನಗರ ವಾರ್ಡಿನಲ್ಲಿ 11 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಸುಬ್ರಹ್ಮಣ್ಯನಗರ ವಾರ್ಡಿನ ಪುತ್ತೂರು ಮುಂಡ್ರುಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಹಡಿಲು ಭೂಮಿ ಕೃಷಿ ಕಾರ್ಯಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಬಾಳಿಗಾ ಫಿಶ್ ನೆಟ್ ವ್ಯವಸ್ಥಾಪಕ ನಿರ್ದೇಶಕ ಮುರಳೀಧರ ಬಾಳಿಗಾ ಇವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಅವರು ಭೂಮಿಗೆ ಹಾಲನ್ನು ಅರ್ಪಿಸಿ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು.
ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಸಭಾ ಸದಸ್ಯೆ ಜಯಂತಿ, ಉದ್ಯಮಿ ಮಹೇಶ್ ಶೆಟ್ಟಿ, ಸಾಗರ್ ಸಿರಾಮಿಕ್ ನ ಸಂತೋಷ್ ಶೆಟ್ಟಿ, ಹಿರಿಯ ಕೃಷಿಕರಾದ ಸುಂದರ್ ಶೆಟ್ಟಿ, ಶಂಕರ್ ಶೆಟ್ಟಿ, ಐತಪ್ಪ ಶೆಟ್ಟಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ. ರಾಘವೇಂದ್ರ ಕಿಣಿ, ಸದಸ್ಯ ದಿನೇಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.