Tuesday, February 25, 2025
Tuesday, February 25, 2025

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ: ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ: ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ

Date:

ಉಡುಪಿ, ಅ.10: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ನೀರಿನ ಮೂಲ ದೃಢೀಕರಣ ಪತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ಛಾಪಾ ಕಾಗದಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿಯನ್ನು ಹೊಂದಿರಬೇಕು. ರೈತರು ಈಗಾಗಲೇ ಪ್ರೂಟ್ಸ್ ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳಬೇಕು ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!