Sunday, January 19, 2025
Sunday, January 19, 2025

ಆಗಸ್ಟ್ 14: ಮೆಗಾ ಲೋಕ್ ಅದಾಲತ್

ಆಗಸ್ಟ್ 14: ಮೆಗಾ ಲೋಕ್ ಅದಾಲತ್

Date:

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಆಗಸ್ಟ್ 14 ರಂದು ಮೆಗಾ ಲೋಕ್ ಅದಾಲತ್‌ನ್ನು ಅಯೋಜಿಸಲಾಗುವುದು.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು, ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂ.ಎಂ.ಡಿ.ಆರ್. ಪ್ರಕರಣ, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್/ಸಾಲದ ವಸೂಲಾತಿ ಪ್ರಕರಣಗಳು, ಮೋಟಾರು/ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು (ವಿಚ್ಛೇದನೆಯನ್ನು ಹೊರತುಪಡಿಸಿ), ಭೂ-ಸ್ವಾಧೀನ ಪರಿಹಾರ ಪ್ರಕರಣಗಳು, ಭೂ-ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು ಹಾಗೂ ಸಿವಿಲ್ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೊ.ನಂ: 9480898702 ಅನ್ನು ಸಂಪರ್ಕಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜೆ.ಎನ್. ಸುಬ್ರಹ್ಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!