Saturday, November 23, 2024
Saturday, November 23, 2024

ಪತ್ರಿಕಾ ದಿನಾಚರಣೆ ಪ್ರಯುಕ್ತ ಪತ್ರಕರ್ತರ ಆರೋಗ್ಯ ತಪಾಸಣೆ

ಪತ್ರಿಕಾ ದಿನಾಚರಣೆ ಪ್ರಯುಕ್ತ ಪತ್ರಕರ್ತರ ಆರೋಗ್ಯ ತಪಾಸಣೆ

Date:

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಪತ್ರಕರ್ತರ ಆರೋಗ್ಯ ತಪಾಸಣಾ ಶಿಬಿರವನ್ನು ಗುರುವಾರ ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾಗಿತ್ತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಇಂದಿನ ಕೊರೋನಾ ಕಾಲಘಟ್ಟದಲ್ಲಿ ಮಾನವೀಯ ವೌಲ್ಯ ಹಾಗೂ ಸಂಬಂಧದೊಂದಿಗೆ ಇನ್ನಷ್ಟು ಜನಪರ ಕೆಲಸಗಳು ವೈದ್ಯರು ಹಾಗೂ ಪತ್ರಕರ್ತರಿಂದ ಆಗಬೇಕು. ಕೋವಿಡ್ ಸಂಕಷ್ಟ ಸಮಯದಲ್ಲಿ ಜನರನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ಪತ್ರಕತರ್ಕರ ಸೇವೆ ಅಭಿನಂದನೀಯ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯ ವೈದ್ಯೆ ಡಾ.ರೋಶಿನಿ ಪೂಂಜಾ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಮೊದಲಾದವರು ಉಪಸ್ಥಿತರಿದ್ದರು. ಶಿಬಿರದಲ್ಲಿ ಉಡುಪಿ ಜಿಲ್ಲೆಯ 50ಕ್ಕೂ ಅಧಿಕ ಪತ್ರಕರ್ತರ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಸಲಹೆಗಳನ್ನು ವೈದ್ಯರು ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!