Tuesday, February 25, 2025
Tuesday, February 25, 2025

ಏಕತೆಗಾಗಿ ಓಟ ಕಾರ್ಯಕ್ರಮ

ಏಕತೆಗಾಗಿ ಓಟ ಕಾರ್ಯಕ್ರಮ

Date:

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ಸ.ಪ್ರ.ದ.ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಉಡುಪಿಯಲ್ಲಿ ಇಂದು ನಡೆದ ಏಕತೆಗಾಗಿ ಓಟ ಎಂಬ ಘೋಷ ವಾಕ್ಯದಡಿ ಜಿಲ್ಲಾ ಮಟ್ಟದ ಕ್ರಾಸ್ ಕಂಟ್ರಿ ಓಟದ ಉದ್ಘಾಟನೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹಾಗೂ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಜಂಟಿಯಾಗಿ ಚಾಲನೆ ನೀಡಿದರು.

 

ಕಾರ್ಯಕ್ರಮದಲ್ಲಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆಂಪರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಡಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. 3 ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸುಮಾರು 300 ಸ್ಪರ್ಧಿಗಳು ಭಾಗವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ವಿಜೇತರಾದ ಮೊದಲ ಆರು ಸ್ಫರ್ಧಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹಾಗೂ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!