ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಒಳಕಾಡು ವಾರ್ಡಿನಲ್ಲಿ ಸುಮಾರು 7 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಶಾರದಾ ಕಲ್ಯಾಣ ಮಂಟಪ ಬೀಡಿನಗುಡ್ಡೆ ರಸ್ತೆ ಬ್ರಿಡ್ಜ್ ಬಳಿ 7 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಆದಿತ್ಯವಾರ ಚಾಲನೆ ನೀಡಲಾಯಿತು.
ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಎ.ಸಿ.ಸಿ.ಇ.ಎ ಗೌರವಾಧ್ಯಕ್ಷ ಸ್ವದೇಶಿ ಹೋಟೆಲ್ ನಾಗೇಶ್ ಹೆಗ್ಡೆ ಇವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಅವರು ಭೂಮಿಗೆ ಹಾಲನ್ನು ಅರ್ಪಿಸುವ ಮೂಲಕ ಕೈ ನಾಟಿಗೆ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನಟ್ಟರು.
ಈ ಸಂದರ್ಭದಲ್ಲಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ಸ್ಥಳೀಯ ನಗರಸಭಾ ಸದಸ್ಯರಾದ ರಜನಿ ಹೆಬ್ಬಾರ್, ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ಹೆಬ್ಬಾರ್, ಉದ್ಯಮಿಗಳಾದ ಸಂತೋಷ್ ಶೆಟ್ಟಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ಕೆ. ರಾಘವೇಂದ್ರ ಕಿಣಿ ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್, ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು, ಕೃಷಿಕರು ಉಪಸ್ಥಿತರಿದ್ದರು.