ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಬನ್ನಂಜೆ ವಾರ್ಡಿನಲ್ಲಿ ಸುಮಾರು 10 ಎಕರೆ ಮತ್ತು ಸ್ಥಳೀಯ ಕೃಷಿಕರ ಮೂಲಕ 1 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಬನ್ನಂಜೆ ವಾರ್ಡಿನ ಮೂಡನಿಡಂಬೂರು ಗರಡಿ 1ನೇ ಅಡ್ಡರಸ್ತೆ ಬಳಿ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ತುಳು ಜ್ಞಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಹಾಗೂ ಸಾಯಿರಾಧಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಮನೋಹರ್ ಶೆಟ್ಟಿ ಇವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಅವರು ಭೂಮಿಗೆ ಹಾಲನ್ನು ಅರ್ಪಿಸಿ ನೇಜಿ ನೆಡುವುದರ ಮೂಲಕ ಕೈ ನಾಟಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ. ರಾಘವೇಂದ್ರ ಕಿಣಿ, ನಗರಸಭಾ ಸದಸ್ಯೆ ಸವಿತಾ ಹರೀಶ್ ರಾಮ್, ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬುಬಕ್ಕರ್, ಮಾಜಿ ನಗರಸಭಾ ಸದಸ್ಯ ಹರೀಶ್ ರಾಮ್, ಬೂತ್ ಅಧ್ಯಕ್ಷ ಸುಧಾಕರ್, ಸ್ಥಳೀಯ ಕೃಷಿಕ ಬನ್ನಂಜೆ ಶಿವರಾಮ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.