Sunday, October 20, 2024
Sunday, October 20, 2024

‘ಮನೆ ಮನೆಗೆ ಗಂಗೆ’ ಯಕ್ಷಗಾನ ಪ್ರದರ್ಶನ

‘ಮನೆ ಮನೆಗೆ ಗಂಗೆ’ ಯಕ್ಷಗಾನ ಪ್ರದರ್ಶನ

Date:

ಕೋಟ, ಜು. 20: ಕೋಟತಟ್ಟು ಗ್ರಾಮ ಪಂಚಾಯತ್ ಸಾರಥ್ಯದಲ್ಲಿ ಜಿಲ್ಲಾ ಪಂಚಾಯತ್ ಉಡುಪಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಉಡುಪಿ, ಪುಣ್ಯಕೋಟಿ ಅನುಷ್ಠಾನ ಬೆಂಬಲ ಸಂಸ್ಥೆ, ಜಲಜೀವನ ಮಿಷನ್ ಯೋಜನೆಯಡಿ ಶಶಿಚಂದ್ರ ಯಕ್ಷಗಾನ ಬಳಗ ಉಡುಪಿ ಇವರ ಸಹಯೋಗದಲ್ಲಿ ‘ಮನೆ ಮನೆಗೆ ಗಂಗೆ’ ಎನ್ನುವ ಯಕ್ಷಗಾನ ಪ್ರದರ್ಶನ ಗುರುವಾರ ವಿವೇಕ ಪದವಿಪೂರ್ವ ಕಾಲೇಜಿನಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶ್ವಿನಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬ್ರಹ್ಮಾವರ ತಾಲೂಕು ಪಂಚಾಯತ್ ನ ಕಾರ್ಯನಿರ್ವಹಣಾಧಿಕಾರಿಯಾದ ಎಚ್. ವಿ .ಇಬ್ರಾಹಿಂಪುರ ಅವರು ಚಂಡೆ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಾಸು ಪೂಜಾರಿ, ಸದಸ್ಯರಾದ ಕೆ. ಸತೀಶ್ ಕುಂದರ್, ಪುಣ್ಯಕೋಟಿ ಅನುಷ್ಠಾನ ಬೆಂಬಲ ಸಂಸ್ಥೆ ಜೆಜೆಎಂ ತಂಡದ ನಾಯಕರಾದ ಗಿರೀಶ್ ಟಿ.ವಿ., ಹಾಗೂ ತಂಡದವರು, ಜಿಲ್ಲಾ ಪಂಚಾಯತ್ ನ ಸುಧೀರ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವೇಕ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ, ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕೋಟತಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು ಹಾಗೂ ವಿವೇಕ ಬಾಲಕರ ಪ್ರೌಢಶಾಲೆಯ ಮುಖ್ಯೋಪಧ್ಯಾಯ ವೆಂಕಟೇಶ್ ಉಡುಪ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬುಲೆಟಿನ್ ವರದಿ ಇಮ್ಪ್ಯಾಕ್ಟ್; ಕಲ್ಸಂಕ ಫುಟ್ಪಾತ್ ನಲ್ಲಿದ್ದ ಕೇಬಲ್ ವಯರ್ ತೆರವು

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌...

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

ಉಡುಪಿ, ಅ.19: ಕೆ.ಪಿ.ಎಸ್.ಸಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ (P.D.O.)...

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

ಉಡುಪಿ, ಅ.19: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್...
error: Content is protected !!