1. ಉಡುಪಿ ನಗರದ ಆಯುಷ್ ಇಲಾಖೆಯಲ್ಲಿ ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಉಡುಪಿ ಸಹಯೋಗದಲ್ಲಿ ಯೋಗ ದಿನವನ್ನು ಆಚರಿಸಲಾಯಿತು. ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲಾ ಆಯುಷಾಧಿಕಾರಿ ಪ್ರಕಾಶ್ ನಾಯ್ಕ್, ಶಿಕ್ಷಣ ಪ್ರಮುಖರಾದ ಲಲಿತಾ ಕೆಂದ್ಲಾಯಿ, ಡಾ. ವೀಣಾ ಕಾರಂತ್ ಮುಂತಾದವರು ಉಪಸ್ಥಿತರಿದ್ದರು.
2. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಂಬಲಪಾಡಿ ಹೋಟೆಲ್ ಕಾರ್ತಿಕ್ ಎಸ್ಟೇಟ್ ಸಭಾಂಗಣದಲ್ಲಿ ಯೋಗ ಶಿಬಿರ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷರಾದ ಯಶ್ಪಾಲ್ ಸುವರ್ಣ, ಬಿಜೆಪಿ ಮಂಗಳೂರು ಪ್ರಭಾರಿ ಉದಯಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ, ಕೋಶಾಧಿಕಾರಿಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ರಾಜ್ಯ ವೈದ್ಯಕೀಯ ಪ್ರಕೋಷ್ಠ ಪದಾಧಿಕಾರಿ ಡಾ. ವಿಜಯೇಂದ್ರ, ಯೋಗ ಶಿಕ್ಷಕಿ ಡಾ. ಮಂಜರಿ ಚಂದ್ರ ಉಪಸ್ಥಿತರಿದ್ದರು.
3. ರೋಟರಿ ಉಡುಪಿ, ಶ್ರೀ ಕೃಷ್ಣ ರೋಟರಾಕ್ಟ ಇಂಟರಾಕ್ಟ್, ಶ್ರೀ ಕೃಷ್ಣ ಬಾಲನಿಕೇತನ ಮತ್ತು ಚೈಲ್ಡ್ ಲೈನ್ ಉಡುಪಿ ಜಂಟಿಯಾಗಿ ವಿಶ್ವ ಯೋಗ ದಿನವನ್ನು ಕುಕ್ಕಿಕಟ್ಡೆ ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಆಚರಿಸಲಾಯಿತು. ಯೋಗಗುರು ಸಂದ್ಯಾ ಕಾಮತ್, ರೋಟರಿ ಅಧ್ಯಕ್ಷೆ ರಾಧಿಕಾ ಲಕ್ಷ್ಮೀನಾರಾಯಣ, ರೋಟರಿ ಕಾರ್ಯದರ್ಶಿ ದೀಪಾ ಭಂಡಾರಿ, ರೋಟರಾಕ್ಟ ಅಧ್ಯಕ್ಷೆ ಶೃತಿ ಶೆಣೈ, ಚೈಲ್ಡ್ ಲೈನ್ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ, ದಿನೇಶ್ ಭಂಡಾರಿ, ಗುರುರಾಜ ಭಟ್ ಮತ್ತಿತರರು ಉಪಸ್ಥಿತರಿದ್ದರು.
4. ಪ್ರಬೋಧಿನಿ ಯೋಗಕೇಂದ್ರ ಕೊಪ್ಪ ಇಲ್ಲಿ ಕೋವಿಡ್19 ರ ನಿಯಮ ಪಾಲನೆಯೊಂದಿಗೆ ಸರಳವಾಗಿ ಆಚರಿಸಲಾಯಿತು.
5. ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಯೋಗ ಶಿಬಿರ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉದ್ಘಾಟಿಸಿದರು. ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಯೋಗ ಶಿಕ್ಷಕಿ, ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷೆ ಲೀಲಾ ಆರ್. ಅಮೀನ್, ಯೋಗ ಸಹ ಶಿಕ್ಷಕಿ ಉಡುಪಿ ನಗರಸಭಾ ನಾಮ ನಿರ್ದೇಶಿತ ಸದಸ್ಯೆ ಸುಭೇದಾ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಕಛೇರಿ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕಷ್ಣ ಶೆಟ್ಟಿ, ಕೋಶಾಧಿಕಾರಿ ರಜನಿ ಹೆಬ್ಬಾರ್ ಮುಂತಾದವರು ಉಪಸ್ಥಿತರಿದ್ದರು.
6. ಉಡುಪಿ ಜಿಲ್ಲಾ ಮೋದಿ ಬ್ರಿಗೇಡ್ ವತಿಯಿಂದ ಯೋಗ ದಿನ ಆಚರಿಸಲಾಯಿತು. ಮುಂಬೈ ಮಹವ್ಯ ಯೋಗಾಲಯದ ಯೋಗ ತರಬೇತುದಾರ ಮಹೇಶ್ ಮುಂಬಯಿ, ಮೋದಿ ಬ್ರಿಗೇಡ್ ಜಿಲ್ಲಾಧ್ಯಕ್ಷರಾದ ಸುಭಾಷಿತ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ನೀತಾ ಪ್ರಭು, ಜಿಲ್ಲಾ ಕಾರ್ಯದರ್ಶಿ ಗಣೇಶ್ ಪಾಟೀಲ್, ಕೋಶಾಧಿಕಾರಿಯಾದ ಉದಯ್ ಶಂಕರ್ ಶೆಣೈ, ಜಿಲ್ಲಾ ಮಹಿಳಾ ಬ್ರಿಗೇಡ್ ಅಧ್ಯಕ್ಷರಾದ ವೇದಾವತಿ ಹೆಗ್ಡೆ, ಮಹಿಳಾ ಕಾರ್ಯದರ್ಶಿ ಸುಮನಾ ಶೆಟ್ಟಿ, ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ನಾಗರಾಜ್ ಶೇಟ್ ಮುಂತಾದವರು ಉಪಸ್ಥಿತರಿದ್ದರು.
7. ಮಾಜಿ ನಗರಸಭಾ ಸದಸ್ಯ ಶ್ಯಾಮ್ ಪ್ರಸಾದ್ ಕುಡ್ವ ಇವರ ನೇತೃತ್ವದಲ್ಲಿ ತೆಂಕಪೇಟೆ ಒಳಕಾಡು ಇಲ್ಲಿ ವಿಶ್ವ ಯೋಗ ದಿನ ನಡೆಯಿತು. ಮಹೇಶ್ ಶೆಣೈ, ಮಟ್ಟಾರ್ ಗಣೇಶ್ ಕಿಣಿ, ಮಾಧವ್ ಕಾಮತ್, ಅಜಿತ್ ಪೈ, ಸ್ವಾತಿ ಕಾಮತ್, ಸುಮಂಗಳ, ರವಿನಾಥ್ ಪೈ, ಪ್ರತೀಕ್ ಕಾಮತ್, ನಾಗರಾಜ್ ಶೆಣೈ, ಶ್ರೀಶ ಶೆಣೈ, ವಿಗ್ನೇಶ್ ಶೆಣೈ, ಆದಿತ್ಯ ಭಟ್, ಶ್ರೀನಿವಾಸ್ ಕಾಮತ್, ವಿವೇಕ್ ನಾಯಕ್ ಇನ್ನಿತರರು ಪಾಲ್ಗೊಂಡರು.
8. ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವತಿಯಿಂದ ಮನೆಯೊಳಗೆ ಯೋಗ ಮನೆಯವರೊಂದಿಗೆ ಯೋಗ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷರು, ಸಂಚಾಲಕರು, ಸ್ಥಾಪಕಾಧ್ಯಕ್ಷರು, ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಸದಸ್ಯರೆಲ್ಲರೂ ಅವರವರ ಮನೆಯಲ್ಲೇ ಯೋಗಾಭ್ಯಾಸ ನಡೆಸಿದರು.
9. ವಿಶ್ವ ಯೋಗ ದಿನದ ಅಂಗವಾಗಿ ಯುವ ವಿಚಾರ ವೇದಿಕೆ (ರಿ.) ಉಪ್ಪೂರು ಕೊಳಲಗಿರಿ ವತಿಯಿಂದ “ಮನೆ ಮನದಲ್ಲಿ ಯೋಗ” ಎಂಬ ಕಾರ್ಯಕ್ರಮದ ಮೂಲಕ ಇಂದು ಬೆಳಿಗ್ಗೆ 7 ಗಂಟೆಯಿಂದ 8 ಗಂಟೆಯವರೆಗೆ ಸಂಘದ ಸದಸ್ಯರು ಅವರವರ ಮನೆಯಲ್ಲಿ ಯೋಗ ಮಾಡುವುದರ ಮೂಲಕ ವಿಶ್ವ ಯೋಗ ದಿನವನ್ನು ಅವಿಸ್ಮರಣೀಯ ಗೊಳಿಸಲಾಯಿತು. ವೇದಿಕೆಯ ಸದಸ್ಯರಾದ ಯೋಗೀಶ್, ಸದಾಶಿವ, ರವೀಂದ್ರ, ಸುಕೇಶ್, ದಿನೇಶ್, ಭವಾನಿಶಂಕರ, ಸಂದೀಪ್ ಶೆಟ್ಟಿ, ವೈಭವ್, ಸುಬ್ರಹ್ಮಣ್ಯ ಆಚಾರ್ಯ ಮನೆಯಲ್ಲಿ ಯೋಗ ಮಾಡುವುದರ ಮೂಲಕ ವಿಶ್ವ ಯೋಗ ದಿನ ಆಚರಿಸಿದರು.
10. ಉಡುಪಿ ನಗರ ಬಿಜೆಪಿ ಘಟಕದಿಂದ ಮಣಿಪಾಲದ ಹೊಟೇಲ್ ಕಂಟ್ರಿ ಇನ್ ನಲ್ಲಿ ಯೋಗ ದಿನವನ್ನು ಆಚರಿಸಲಾಯಿತು. ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ನನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ, ಪೆರ್ಣಂಕಿಲ ಶ್ರೀಶ ನಾಯಕ್ ಮುಂತಾದವರು ಉಪಸ್ಥಿತರಿದ್ದರು.
11. ಶಿರ್ವ ಸಂತ ಮೇರಿ ಮಹಾವಿದ್ಯಾಲಯ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಯೋಗ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ,ಉಡುಪಿ ಘಟಕದ ಆಡಳಿತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪರ್ಮಿಂದರ್ ಸಿಂಘ್, ಎಲ್ಲಾ ಕಾಲೇಜಿನ ಎನ್.ಸಿ.ಸಿ,ಅಧಿಕಾರಿಗಳು, ಘಟಕದ ಸಹ ಸಂಯೋಜಕಿ ಯಶೋದ ರವರು,ಸೀನಿಯರ್ ಕ್ಯಾಡೆಟ್ ಅಂಡರ್ ಆಫೀಸರ್ ರಾಮದಾಸ್, ಜೂನಿಯರ್ ಅಂಡರ್ ಆಫೀಸರ್ ಪ್ರವಿತ ಮತ್ತು ರಿಯಾನ್ ರಿಷಿ ಅಲ್ಫೋನ್ಸೋ, ಕಾಲೇಜಿನ ಬೋಧಕ ಬೋಧಕೇತರರು, ಕ್ಯಾಡೆಟ್ ಗಳು ಸಹಕರಿಸಿದರು.