ಉಡುಪಿ ತಾಲೂಕು ಪುತ್ತೂರು ಗ್ರಾಮದ ಸಂತೆಕಟ್ಟೆಯ ಅಪಾರ್ಟ್ಮೆಂಟ್ ಒಂದರ ಸೆಕ್ಯೂರಿಟಿ ರೂಮಿನಲ್ಲಿ ವಾಸವಿದ್ದ ಕೇರಳ ಮೂಲದ ತಂಗನ್ (60) ಎಂಬುವವರು ಜೂನ್ 25 ರಂದು ತಾನು ವಾಸವಿದ್ದ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.
ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಮೊ.ನಂ: 9480805408, ಉಡುಪಿ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805445, ನಗರ ಪೊಲೀಸ್ ಠಾಣೆಯ ದೂ.ಸಂಖ್ಯೆ: 0820-2520444, ಜಿಲ್ಲಾ ನಿಸ್ತಂತು ಕಚೇರಿ ದೂ.ಸಂಖ್ಯೆ: 0820-2526444 ಅಥವಾ ನಗರ ಠಾಣೆಯ ಇ-ಮೇಲ್ udupitownudp@ksp.gov.in ಅನ್ನು ಸಂಪರ್ಕಿಸುವಂತೆ ಉಡುಪಿ ನಗರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




By
ForthFocus™