Sunday, September 22, 2024
Sunday, September 22, 2024

ಶಿರ್ವ: ಲಸಿಕಾ ಅಭಿಯಾನ

ಶಿರ್ವ: ಲಸಿಕಾ ಅಭಿಯಾನ

Date:

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ, ಕಾಲೇಜಿನ ವಿವಿಧ ಘಟಕಗಳಾದ ಎನ್.ಸಿ.ಸಿ, ಎನ್.ಎಸ್.ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್ ಸಂಯುಕ್ತ ಆಶ್ರಯದಲ್ಲಿ ಲಸಿಕಾಕರಣ ಅಭಿಯಾನ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ, ವಿದ್ಯಾರ್ಥಿಗಳಿಗೆ ಕಾಲೇಜಿನ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಸೋಮವಾರ ನಡೆಯಿತು.

ಲಸಿಕಾಕರಣ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಮಾತನಾಡುತ್ತಾ, ಮುಂದಿನ ತಿಂಗಳಿನಿಂದ ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಇದರ ಪೂರ್ವಭಾವಿಯಾಗಿ ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗೆ ಕೋವಿಡ್ -19 ಲಸಿಕಾಕರಣ ನಡೆಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಕಾಲೇಜಿನ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಲಸಿಕೆಗಳ ಲಭ್ಯತೆಗೆ ಅನುಸಾರವಾಗಿ ಕಾಲೇಜು ಆವರಣದಲ್ಲಿಯೇ ಲಸಿಕಾಕರಣ ಅಭಿಯಾನ ಆಯೋಜಿಸಲಾಯಿತು. ಕಾಲೇಜು ಆಡಳಿತ ವ್ಯವಸ್ಥೆಯ ಸಹಕಾರದಿಂದ ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಪಾಲಿಸಿಕೊಂಡು ಲಸಿಕೆ ವಿತರಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆರಾಲ್ಡ್ ಐವನ್ ಮೋನಿಸ್ ಮಾತನಾಡುತ್ತಾ, ಪ್ರಸ್ತುತ ಕೋವಿಡ್ ನಂತಹ ಸಾಂಕ್ರಾಮಿಕ ಕಾಯಿಲೆಗಳನ್ನು ಎದುರಿಸಬೇಕಾದರೆ ನಮ್ಮ ಶರೀರದಲ್ಲಿ ರೋಗನಿರೋಧಕ ಶಕ್ತಿಯನ್ನು ಲಸಿಕೆ ಪಡೆಯುವ ಮೂಲಕ ವೃದ್ಧಿಸಿಕೊಳ್ಳಬೇಕಾಗಿರುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶಿರ್ವ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ಭಟ್ ರವರು ಜಿಲ್ಲಾಡಳಿತದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಮಾಡಲಾಗುತ್ತಿದ್ದು ಕಾಲೇಜುಗಳ ಮೂಲಕ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದೆ ಎಂದು ಹೇಳಿದರು.

ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಯಶೋದಾ, ಎನ್‍ಎಸ್‍ಎಸ್ ಅಧಿಕಾರಿ ಪ್ರೇಮನಾಥ್, ರಕ್ಷಾ, ಸ್ಯಾಮ್ ಜೋಯಲ್ ಡಯಾಸ್, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕರಾದ ಸುಧಾ, ವಿನಯ, ಸಂಜಯ್, ದಿನೇಶ್ ಹಾಗೂ ಆಶಾ ಕಾರ್ಯಕರ್ತರಾದ ಅಮಿತ, ಪಾರ್ವತಿ, ರೆಹೆಮತ್‍, ಯೂತ್ ರೆಡ್ ಕ್ರಾಸ್ ಸಂಯೋಜಕ ಮುರಳಿ, ರೋವರ್ಸ್-ರೇಂಜರ್ಸ್ ಘಟಕದ ಪ್ರಕಾಶ್, ಸಂಗೀತ ಪೂಜಾರಿ, ಸಮಾಜ ಸೇವಕ ಪವನ್ ಕುಮಾರ್ ಶಿರ್ವ, ಬೋಧಕ, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!