Tuesday, November 10, 2026
Tuesday, November 10, 2026

ಶೀರೂರು ಪರ್ಯಾಯ: ನಳ-ದಮಯಂತಿ’ ಯಕ್ಷಗಾನ

ಶೀರೂರು ಪರ್ಯಾಯ: ನಳ-ದಮಯಂತಿ’ ಯಕ್ಷಗಾನ

Date:

ಉಡುಪಿ, ಜ.24: ಉಡುಪಿ ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ನಿಮಿತ್ತ ರಾಜಾಂಗಣದಲ್ಲಿ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಯಕ್ಷಗಾನ ಕಲಾರಂಗ ಉಡುಪಿ ಸಂಯೋಜನೆಯಲ್ಲಿ ಶುಕ್ರವಾರ ರಾತ್ರಿ ವಿವಿಧ ಖ್ಯಾತ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ನಳ-ದಮಯಂತಿ’ ಯಕ್ಷಗಾನ ಪ್ರದರ್ಶನ ನಡೆಯಿತು.

ಹಿಮ್ಮೇಳದಲ್ಲಿ ಜನ್ಸಾಲೆ ರಾಘವೇಂದ್ರ ಆಚಾರ್ಯ, ಹಿಲ್ಲೂರು ರಾಮಕೃಷ್ಣ ಹೆಗಡೆ, ಪರಮೇಶ್ವರ ಭಂಡಾರಿ ಕರ್ಕಿ, ಶಶಾಂಕ ಆಚಾರ್ಯ, ಶಿವಾನಂದ ಕೋಟ, ಮುಮ್ಮೇಳದಲ್ಲಿ ಬಳ್ಕೂರು ಕೃಷ್ಣ ಯಾಜಿ (ಋತುಪರ್ಣ), ಕೊಂಡದಕುಳಿ ರಾಮಚಂದ್ರ ಹೆಗಡೆ (ನಳ ಮಹಾರಾಜ), ಅಶೋಕ್ ಭಟ್ ಸಿದ್ಧಾಪುರ (ಶನಿ), ಚಪ್ಪರಮನೆ ಶ್ರೀಧರ ಹೆಗಡೆ (ಹಾಸ್ಯ) ಮೂರೂರು ಸುಬ್ರಹ್ಮಣ್ಯ ಹೆಗಡೆ (ದಮಯಂತಿ), ಮುಗ್ವಾ ಗಣೇಶ್ ನಾಯ್ಕ, ವಿನಯ್ ಬೇರೊಳ್ಳಿ, ನಿರಂಜನ ಜಾಗ್ನಳ್ಳಿ, ದೀಪಕ್ ಕುಂಕಿ ಉತ್ತಮವಾಗಿ ಪಾತ್ರ ನಿರ್ವಹಿಸಿದರು.

ಶೀರೂರು ಮಠದ ಹೊರೆಕಾಣಿಕೆ ಸಮಿತಿಯ ಸಂಚಾಲಕ ಸುಪ್ರಸಾದ ಶೆಟ್ಟಿ ಬೈಕಾಡಿ, ಕಲಾರಂಗದ ನಾರಾಯಣ ಹೆಗಡೆ ಎಲ್ಲ ಕಲಾವಿದರನ್ನು ಶ್ರೀಕೃಷ್ಣ ಮಠದ ಪರವಾಗಿ ಸ್ವಾಗತಿಸಿ, ಪ್ರೇಕ್ಷಕರಿಗೆ ಪರಿಚಯಿಸಿದರು. ಪ್ರದರ್ಶನದ ಬಳಿಕ ಎಲ್ಲ ಕಲಾವಿದರಿಗೆ ಪರ್ಯಾಯ ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರು ಅನುಗ್ರಹ ಮಂತ್ರಾಕ್ಷತೆ, ಕೃಷ್ಣನ ಮೂರ್ತಿ ನೀಡಿ ಆಶೀರ್ವದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ಸಂಸ್ಕೃತಿ ಬೆಳಗಿದ ಆಕಾಶದೀಪ; ಇತಿಹಾಸ ನೆನಪಿಸಿದ ಪರ್ಕಳ ವಾಲಿಬಾಲ್​ ಫ್ರೆಂಡ್ಸ್​

ಕ್ರೀಡಾ ಕ್ಷೇತ್ರದೊಂದಿಗೆ ಸಾಮಾಜಿಕ ಕಾರ್ಯಗಳ ಮೂಲಕವೂ ನಾಡಿನ ಗಮನ ಸೆಳೆಯುವ ಪರ್ಕಳದ...

ಹಿಂದಿನ ಎಲ್ಲಾ ಸಾಧಕರು ಮಾತೃಭಾಷೆಯಲ್ಲೇ ಶಿಕ್ಷಣ ಪಡೆದಿದ್ದಾರೆ: ಸಾಹಿತಿ ಇಂದಿರಾ ಹಾಲಂಬಿ

ಉಡುಪಿ, ನ.9: ದೇಶ ಬಹಳಷ್ಟು ಪ್ರಗತಿ ಸಾಧಿಸಿದೆ. ಶೈಕ್ಷಣಿಕ, ತಾಂತ್ರಿ​ಕ ಕ್ಷೇತ್ರದಲ್ಲಿ...

ಶ್ರೀಕೃಷ್ಣ ಮಠದಲ್ಲಿ ಗೋಪೂಜೆ ಸಂಭ್ರಮ; ರಥಬೀದಿಯಲ್ಲಿ ವೈಭವದ ಗೋ-ಮೆರವಣಿಗೆ

ಉಡುಪಿ, ನ.9: ಶ್ರೀಕೃಷ್ಣ ಮಠದಲ್ಲಿ ದೀಪಾವಳಿ ಸಂದರ್ಭದಲ್ಲಿ ಗೋಪೂಜೆ ವೈಭವದಿಂದ ನಡೆಯಿತು....

ದೀಪಾವಳಿ: ಬೆಳಕಿನ ಹಬ್ಬದ ಸಮಗ್ರ ಇತಿಹಾಸ, ಪೌರಾಣಿಕ ಹಿನ್ನೆಲೆ ಮತ್ತು ಆಚರಣೆಗಳು

ದೀಪಾವಳಿ ಅಥವಾ ದೀಪಾವಳೀ ಎಂದರೆ ಸಂಸ್ಕೃತದಲ್ಲಿ 'ದೀಪಗಳ ಆವಳಿ' (ಸಾಲು ಸಾಲು...
error: Content is protected !!