Monday, October 26, 2026
Monday, October 26, 2026

ಕದ್ರಿ ಯೋಧ ಸ್ಮಾರಕ ಅಭಿವೃದ್ಧಿಗೆ 25 ಲಕ್ಷ: ಶಾಸಕ ಕಾಮತ್

ಕದ್ರಿ ಯೋಧ ಸ್ಮಾರಕ ಅಭಿವೃದ್ಧಿಗೆ 25 ಲಕ್ಷ: ಶಾಸಕ ಕಾಮತ್

Date:

ಮಂಗಳೂರು: ಕದ್ರಿ ಯೋಧ ಸ್ಮಾರಕದಲ್ಲಿ ಸೋಮವಾರ ಕಾರ್ಗಿಲ್ ವಿಜಯ ದಿನದ ಪ್ರಯುಕ್ತ ಯೋಧರಿಗೆ ನುಡಿನಮನ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಕಾರ್ಗಿಲ್ ಯುದ್ಧದಲ್ಲಿ ಅನೇಕ ಯೋಧರು ಬಲಿದಾನ ಮಾಡಿದ್ದಾರೆ. ಅವರೆಲ್ಲರನ್ನೂ ರಾಜಕೀಯ ರಹಿತವಾಗಿ ಗೌರವಿಸುವ ಕೆಲಸವಾಗಬೇಕು. ಮಾತೃಭೂಮಿಯ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ಯೋಧರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಭಾರತ ಎಂದೆಂದಿಗೂ ಶಾಂತಿಯನ್ನು ಬಯಸುವ ರಾಷ್ಟ್ರ. ಆದರೆ ಅದನ್ನು ಅಸಹಾಯಕತೆ ಎಂದು ಭಾವಿಸಿದರೆ ಕಾರ್ಗಿಲ್ ಕದನ, ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ಮೇಲಿನ ದಾಳಿಯ ಮೂಲಕ ಸೇನಾ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿಕೊಡುವಲ್ಲಿ ಭಾರತೀಯ ಸೇನೆ ಸಮರ್ಥವಾಗಿದೆ ಎಂದರು. ಕದ್ರಿಯ ಯೋಧ ಸ್ಮಾರಕದ ಅಭಿವೃದ್ಧಿಗೆ 25 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗುವುದು. ಮೇಲ್ಛಾವಣಿ, ಬೆಳಕಿನ ವ್ಯವಸ್ಥೆ, ಸೌಂಡ್ ಸಿಸ್ಟಮ್, ಕಾರಂಜಿಗಳ ಅಭಿವೃದ್ಧಿ ಸೇರಿದಂತೆ ಯೋಧ ಸ್ಮಾರಕದ ಸಮಗ್ರ ಅಭಿವೃದ್ಧಿಗೆ ಅನುದಾನ ವಿನಿಯೋಗಿಸಲಾಗುವುದು ಎಂದು ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯೆ ಶಕಿಲಾ ಕಾವಾ, ಸೈನಿಕರ ಸಂಘದ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ಬಾಳ, ಕಾರ್ಯದರ್ಶಿ ಕ್ಯಾಪ್ಟನ್ ದೀಪಕ್ ಅಡ್ಯಂತಾಯ, ಸಂಘದ ನಿಕಟಪೂರ್ವ ಅಧ್ಯಕ್ಷ ವಿಕ್ರಮ್ ದತ್ತ, ಹಿರಿಯ ಅಧಿಕಾರಿಗಳಾದ ಬ್ರಿಗೇಡಿಯರ್ ಐ.ಎನ್ ರೈ, ಕರ್ನಲ್ ಎನ್.ಶರತ್ ಭಂಡಾರಿ, ಕರ್ನಲ್ ಜಯಚಂದ್ರನ್, ರೂಪಾ.ಡಿ ಬಂಗೇರ, ಪೂಜಾ ಪೈ, ಪ್ರಶಾಂತ್ ಪೈ, ರೋಟರಿ ಪ್ರಮುಖರಾದ ಜೆ.ಪಿ ರೈ, ಲಯನ್ಸ್ ಪ್ರಮುಖರಾದ ವಿಜಯ ವಿಷ್ಣು ಮಯ್ಯ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ತೈಲ ಬೆಲೆ: ಗರಿಷ್ಠ ಏರಿಕೆ ನಂತರ ಸುಮಾರು 2% ರಷ್ಟು ಕುಸಿತ

ನವದೆಹಲಿ, ಅ.26: ಸುಮಾರು ಆರು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದ ನಂತರ...

ಬ್ರೆಜಿಲ್‌ನಲ್ಲಿ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬಂದ ಲುಲಾ; ಲ್ಯಾಟಿನ್ ಅಮೆರಿಕದಲ್ಲಿ ಟ್ರಂಪ್ ಪ್ರಭಾವಕ್ಕೆ ಹಿನ್ನಡೆ

ಯು.ಬಿ.ಎನ್.ಡಿ., ಅ.26: ಭಾನುವಾರ ನಡೆದ ಬ್ರೆಜಿಲ್‌ನ ನಿರ್ಣಾಯಕ ಮತದಾನದಲ್ಲಿ ಸೆನೆಟರ್ ಫ್ಲಾವಿಯೊ...

ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ

ಬಸ್ರೂರು, ಅ.26: ಬಸ್ರೂರು ಶ್ರೀ ಶಾರದಾ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ...

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...
error: Content is protected !!