ಉಡುಪಿ: ಜಿಲ್ಲೆಯ ವಿವಿದೆಡೆ 75ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕೆಲವೆಡೆ ಧ್ವಜಾರೋಹಣದ ಸಂದರ್ಭದಲ್ಲಿ ತುಂತುರು ಮಳೆಯಾಯಿತು.
ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿ ನೆರವೇರಿಸಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕಪ್ಪೆಟ್ಟು ಪ್ರವೀಣ ಶೆಟ್ಟಿ, ಕಿಶೋರ್ ಕರಂಬಳ್ಳಿ, ಪ್ರಭಾಕರ ಪೂಜಾರಿ, ಸುಮಾ ನಾಯ್ಕ್, ನಗರ ಯೋಜನಾ ಸದಸ್ಯರಾದ ಗುರುಪ್ರಸಾದ್, ಅಧಿಕಾರಿಗಳಾದ ನಯೀಮಾ ಸಯೀದ್, ಶ್ವೇತಾ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸಾಣೂರು: ಯುವಕ ಮಂಡಲ (ರಿ.) ಸಾಣೂರು ಇದರ ಕಚೇರಿಯಲ್ಲಿ 75 ನೇ ಸ್ವಾತಂತ್ರೋತ್ಸವ ದಿನಾಚರಣೆಯ ಧ್ವಜಾರೋಹಣ ಮಂಡಲದ ಅಧ್ಯಕ್ಷ ಪ್ರಸಾದ್ ಪೂಜಾರಿ ನೆರವೇರಿಸಿದರು. ಪ್ರಧಾನ ಕಾರ್ಯದರ್ಶಿ ಮೋಹನ್ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ಏಕನಾಥ್ ಜಿ ಪ್ರಭು, ಪ್ರವೀಣ್ ಶೆಟ್ಟಿ, ದೇವಾನಂದ್ ಶೆಟ್ಟಿ, ಜಗದೀಶ್ ಕುಮಾರ್, ಶಂಕರ್ ಶೆಟ್ಟಿ, ಪ್ರಕಾಶ್ ಮಡಿವಾಳ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ರಾಜೇಶ್ ಪೂಜಾರಿ, ಜೊತೆ ಕಾರ್ಯದರ್ಶಿಗಳಾದ ಪ್ರಮಿತ್ ಸುವರ್ಣ, ಪ್ರಕಾಶ್ ರಾವ್, ರಾಘು ಸುವರ್ಣ, ಗೋಪಾಲ್ ಶೇರಿಗಾರ, ನರಸಪ್ಪ ಮುಂತಾದವರು ಉಪಸ್ಥಿತರಿದ್ದರು.
ಕೆದಿಂಜೆ: ನೆಹರೂ ಯುವ ಕೇಂದ್ರ ಉಡುಪಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹಳೆ ವಿದ್ಯಾರ್ಥಿ ಸಂಘ ಕೆದಿಂಜೆ ಇದರ ವತಿಯಿಂದ ಕೆದಿಂಜೆ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಕೆದಿಂಜೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರು ಧ್ವಜಾರೋಹಣ ನೆರವೇರಿಸಿದರು. ಕೆದಿಂಜೆ ಶಾಲಾ ಮುಖ್ಯೋಪಾಧ್ಯಾಯ ಪ್ರಥ್ವಿರಾಜ್ ಬಳ್ಳಾಲ್, ನಂದಳಿಕೆ ಅಬ್ಬನಡ್ಕ ಶ್ರೀದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಪೂರ್ವಾಧ್ಯಕ್ಷ ಸುರೇಶ್ ಪೂಜಾರಿ ಕಾಸ್ರಬೈಲು, ಸತೀಶ್ ಪೂಜಾರಿ ಅಬ್ಬನಡ್ಕ, ಉಪಾಧ್ಯಕ್ಷ ಪ್ರಶಾಂತ್ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಪುಷ್ಪ ಕುಲಾಲ್, ಸದಸ್ಯರಾದ ಸಂಧ್ಯಾ ಶೆಟ್ಟಿ, ಲೀಲಾ ಪೂಜಾರಿ, ಆರತಿ ಕುಮಾರಿ ಮೊದಲಾದವರಿದ್ದರು.
ಶಿರ್ವ: ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸಲಾಯಿತು. ಕಾಲೇಜಿನ ಆಡಳಿತ ಸಹಾಯಕ ಸಿಬ್ಬಂದಿ ಶ್ರೀರಂಗ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೋನಿಸರವರು, ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್‌ಕುಮಾರ್, ಕ್ಯಾಡೆಟ್ ಸೀನಿಯರ್ ಅಂಡರ್ ಆಫೀಸರ್ ಭಟ್ ರಾಮದಾಸ್ ಸತೀಶ್, ಕ್ಯಾಡೆಟ್ ಜೂನಿಯರ್ ಆಫೀಸರ್ ಪ್ರವಿತ ಆಚಾರ್ಯ, ರಿಯಾನ್ ರಿಷಿ ಆಲ್ಫೋನ್ಸೋ, ಕಂಪನಿ ಸಾರ್ಜೆಂಟ್ ಮೇಜರ್ ಪ್ರತಿಮ, ಕ್ವಾರ್ಟರ್ ಮಾಸ್ಟರ್ ರೈನ್ ಅಂದ್ರಾದೆ ಪರೇಡ್ ನ ನೆರವೇರಿಸಿಕೊಟ್ಟರು. ಎನ್ಎಸ್ಎಸ್ ಯೋಜನಾಧಿಕಾರಿ ಶ್ರೀರಕ್ಷಾ, ರೋವರ್ಸ್ ಮತ್ತು ರೇಂಜರ್ಸ್ ಸ್ಕೌಟ್ ಲೀಡರ್ ಗಳಾದ ಪ್ರಕಾಶ್, ಸಂಗೀತ ಪೂಜಾರಿ, ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿ ನಾಯಕರಾದ ಅಕ್ಷಯ್, ಸುರೇಖಾ, ವೈಷ್ಣವಿ, ಅಪೇಕ್ಷಾ, ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಿದ್ಯಾರ್ಥಿ ನಾಯಕರಾದ ಫ್ರಾಂಕ್ಲಿನ್ ಮತಾಯಸ್, ಪ್ರತೀಕ್ಷಾ, ಕಾಲೇಜಿನ ಎಲ್ಲಾ ಭೋಧಕ ಹಾಗು ಭೋಧಕೆತರ ವೃಂದದವರು ಉಪಸ್ಥಿತರಿದ್ದರು. ಸ್ಟಾಫ್ ಸೆಕ್ರೆಟರಿ ರೀಮಾ ಲೋಬೊ ಸ್ವಾಗತಿಸಿ ಎನ್ಎಸ್ಎಸ್ ಅಧಿಕಾರಿ ಪ್ರೇಮನಾಥ್ ವಂದಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಮಾಭಿವೃದ್ಧಿ ನಿರ್ದೇಶಕಿ ಯಶೋದ ಕಾರ್ಯಕ್ರಮ ಸಂಯೋಜಿಸಿದರು.
ಕಲ್ಯಾ: ಚೈತನ್ಯ ಮಿತ್ರ ಮಂಡಳಿ ಕಲ್ಯಾ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಅನೂಪ್ ಧ್ವಜಾರೋಹಣ ನೆರವೇರಿಸಿದರು. ಮಿತ್ರ ಮಂಡಳಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತೆಂಕನಿಡಿಯೂರು: ಗೆಳೆಯರ ಬಳಗ ವಿಷ್ಣುನಗರ ವತಿಯಿಂದ ೭೫ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ರೋವೆಲ್ ಸೂರಜ್ ರವರು ಧ್ವಜಾರೋಹಣ ನೆರವೇರಿಸಿದರು. ಸಂಘದ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪುರ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವತಿಯಿಂದ ಭಾರತದ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ದೈಹಿಕ ಶಿಕ್ಷಣ ಉಪನ್ಯಾಸಕರಾದ ನಾಗರಾಜ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿದರು. ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲ ಉಮೇಶ್ ಕರ್ಣಿಕ್, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.
ಕುಂಜಿಬೆಟ್ಟು: ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಆಯೋಜಿಸಲ್ಪಟ್ಟ 75 ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ದ ಚಾರ್ಟರ್ಡ್ ಅಕೌಂಟೆನ್ಟ್ಸ್ ಆಫ್ ಇಂಡಿಯಾ ಉಡುಪಿ ಶಾಖೆಯ ಅಧ್ಯಕ್ಷರಾದ ಸಿ.ಎ. ಕವಿತಾ ಪೈ ಧ್ವಜಾರೋಹಣಗೈದು ಸ್ವಾತಂತ್ರ್ಯ ಸಂದೇಶವನ್ನು ನೀಡಿದರು. ಕಾಲೇಜಿನ ಪ್ರಾಚಾರ್ಯರಾದ ಡಾ| ಮಧುಸೂದನ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಸಿ.ಎ ವಲಯದ ಸದಸ್ಯರು, ಕಾಲೇಜು ಬೋಧಕ, ಹಾಗೂ ಬೋಧಕೇತರ ಸಿಬ್ಬಂದಿವರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ನಿಖಿತ ಶೆಟ್ಟಿ ಸ್ವಾಗತಿಸಿ, ಭೂಮಿಕ ವಂದಿಸಿ, ಹನೀಷಾ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಗಣೀಶ ಕೋಟ್ಯಾನ್ ಧ್ವಜ ಸಂಹಿತೆ ಬೋಧಿಸಿದರು.
ಇಂದ್ರಾಳಿ: ಉಡುಪಿ ಜಯಂಟ್ಸ್ ಗ್ರೂಪ್ ಹಾಗೂ ಶ್ರೀ ಕೃಷ್ಣ ಪೆಟ್ರೋಲಿಯಂ ಇಂದ್ರಾಳಿ ಜಂಟಿ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಜಯಂಟ್ಸ್ ವಲಯ ನಿರ್ದೇಶಕ ದೇವದಾಸ್ ಕಾಮತ್ ಧ್ವಜಾರೋಹಣ ನೆರವೇರಿಸಿದರು. ಸೆಂಟ್ರಲ್ ಕಮಿಟಿ ಸದಸ್ಯ ದಿನಕರ್ ಅಮೀನ್, ಅಧ್ಯಕ್ಷ ಲಕ್ಷೀಕಾಂತ್ ಬೆಸ್ಕೊರ್, ಮಾಜಿ ಅಧ್ಯಕ್ಷ ಜಗದೀಶ್ ಅಮೀನ್, ರಾಜೇಶ್ ಶೆಟ್ಟಿ, ರಮೇಶ್ ಪೂಜಾರಿ, ಕಾರ್ಯದರ್ಶಿ ಯಶವಂತ ಸಾಲಿಯಾನ್, ಸದಸ್ಯರಾದ ದಯಾನಂದ ಕಲ್ಮಾಡಿ, ವಿನ್ಸೆಂಟ್ ಸಲ್ದಾಹ್ನ, ಪ್ರಭಾಕರ್ ಬಂಗೇರ ಮುಂತಾದವರು ಉಪಸ್ಥಿತರಿದ್ದರು.