ಬೆಂಗಳೂರು, ಮಾ.23: ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸಲು ನೂತನ ವ್ಯವಸ್ಥೆ ರೂಪಿಸಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ಪೂರೈಕೆ ಸರಿಹೋಗಲಿದೆ. ಈ ಮೊದಲು ಒಂದು ವರ್ಷಕ್ಕೆ ಅಗತ್ಯವಿದ್ದ ಔಷಧವನ್ನು ಒಮ್ಮೆಗೇ ಪೂರೈಕೆ ಮಾಡಲಾಗುತ್ತಿದ್ದು, ಈಗ ಮೂರು ತಿಂಗಳಿಗೆ ಅಗತ್ಯವಿರುವಷ್ಟು ಔಷಧವನ್ನು ಪ್ರತ್ಯೇಕ ಪ್ಯಾಕೇಜ್ ಗಳಲ್ಲಿ ಪೂರೈಕೆ ಮಾಡಲಾಗುತ್ತಿದೆ. ನಿಗಮಕ್ಕೆ ಪೂರೈಕೆಯಾದ ಔಷಧಗಳನ್ನು ಪರೀಕ್ಷೆಗೆ ಒಳಪಡಿಸಿ ನಂತರ ಪೂರೈಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸಲು ನೂತನ ವ್ಯವಸ್ಥೆ
ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸಲು ನೂತನ ವ್ಯವಸ್ಥೆ
Date:




By
ForthFocus™