ರಾಜ್ಯದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ಭೂಕಂದಾಯ ಕಾಯ್ದೆ 1964 ರ ಕಲಂ 94 ಸಿ ಮತ್ತು 94 ಸಿಸಿ ರಡಿ ಅರ್ಜಿ ಸಲ್ಲಿಸಲು 2022 ಮಾರ್ಚ್ 31 ರ ವರೆಗೆ ಕಾಲಾವಕಾಶ ನೀಡಲಾಗಿರುತ್ತದೆ.
ಉಡುಪಿ ತಾಲೂಕಿಗೆ ಸಂಬಂಧಿಸಿದಂತೆ ಸರ್ಕಾರಿ ಜಮೀನುಗಳಲ್ಲಿ 2015 ರ ಹಿಂದೆ ಅನಧಿಕೃತವಾಗಿ ನಿರ್ಮಿಸಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ನಮೂನೆ 1 ರಲ್ಲಿ ಅರ್ಜಿ, ಜಮೀನಿನ ಗಣಕೀಕೃತ ಪಹಣಿ, ಮನೆಯ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿ ಪ್ರತಿ ಮತ್ತು ಮನೆ ತೆರಿಗೆ ರಶೀದಿ ಅಥವಾ ವಿದ್ಯುತ್ ಬಿಲ್ ಪಾವತಿ ರಶೀದಿಗಳನ್ನು ಲಗತ್ತಿಸಿ, ಕಚೇರಿಯ ಅಟಲ್ ಜೀ ಜನಸ್ನೇಹಿ ಕೇಂದ್ರದಲ್ಲಿ ನಿಗಧಿತ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸುವಂತೆ ಉಡುಪಿ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.