Monday, January 20, 2025
Monday, January 20, 2025

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನೂತನ ಕಾನೂನು ಮಹಾವಿದ್ಯಾಲಯ ಆರಂಭ; 5 ವರ್ಷಗಳ ಬಿಕಾಂ ಎಲ್‌ಎಲ್‌ಬಿ ಹಾಗೂ 3 ವರ್ಷಗಳ ಎಲ್‌ಎಲ್‌ಬಿ ಪದವಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನೂತನ ಕಾನೂನು ಮಹಾವಿದ್ಯಾಲಯ ಆರಂಭ; 5 ವರ್ಷಗಳ ಬಿಕಾಂ ಎಲ್‌ಎಲ್‌ಬಿ ಹಾಗೂ 3 ವರ್ಷಗಳ ಎಲ್‌ಎಲ್‌ಬಿ ಪದವಿ

Date:

ಮೂಡುಬಿದಿರೆ, ಸೆ.9: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಕಾನೂನು ಮಹಾವಿದ್ಯಾಲಯವನ್ನು ಆರಂಭಿಸುತ್ತಿದೆ. ಕಾನೂನು ಶಿಕ್ಷಣ ಎಲ್ಲಾ ಸ್ತರಗಳ ಹಾಗೂ ವಿವಿಧ ಜ್ಞಾನ ಶಾಖೆಗಳಿಗೆ ಪೂರಕವಾದ ವೃತ್ತಿ ಆಧಾರಿತ ಕೋರ್ಸ ಆಗಿದೆ. ಮೂಡುಬಿದಿರೆಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆ ಇರುವ ಶೈಕ್ಷಣಿಕ ಕರ‍್ಯಕ್ರಮವನ್ನು ಪರಿಚಯಿಸಿ, ಮಧ್ಯಮ ಮತ್ತು ಕೆಳವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಹೊಸ ಸಾಧ್ಯತೆಗಳನ್ನು ಪರಿಚಯಿಸಿದ ಕೀರ್ತಿ ಆಳ್ವಾಸ್‌ಗೆ ಸಲ್ಲುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ತಿಳಿಸಿದರು. ಅವರು ಮೂಡುಬಿದಿರೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಹೊಸ ಕಾನೂನು ಮಹಾವಿದ್ಯಾಲಯವು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್‌ಎಲ್‌ಯು) ಸಂಯೋಜನೆಗೊಂಡಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ಪಡೆದಿದೆ ಎಂದರು.

ಕರಾವಳಿ ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಅತೀ ಹೆಚ್ಚು ಉದ್ಯೋಗ ಸಾಧ್ಯತೆ ಇರುವ 5 ವರ್ಷಗಳ ಬಿಕಾಂ ಎಲ್‌ಎಲ್‌ಬಿ ಪದವಿಯನ್ನು 60 ವಿದ್ಯಾರ್ಥಿ ಪರಿಮಿತಿಯೊಂದಿಗೆ ಹಾಗೂ 3 ವರ್ಷಗಳ ಎಲ್‌ಎಲ್‌ಬಿ ಪದವಿಯನ್ನು 60 ವಿದ್ಯಾರ್ಥಿ ಮಿತಿಯೊಂದಿಗೆ ಈ ವರ್ಷದಿಂದಲೇ ಆರಂಭಿಸುವ ಅನುಮತಿ ದೊರೆತಿದೆ. ಕಾನೂನು ಶಿಕ್ಷಣದಲ್ಲಿ ಉತ್ತಮ ಅನುಭವ ಹೊಂದಿರುವ ಶಿಕ್ಷಕರನ್ನು ಈಗಾಗಲೇ ನೇಮಿಸಿದ್ದು, ಗುಣಾತ್ಮಕವಾದ ಕಾನೂನು ಶಿಕ್ಷಣಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಕಟಿಬದ್ಧವಾಗಿದೆ. ಯಾವುದೇ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು 3 ವರ್ಷಗಳ ಎಲ್‌ಎಲ್‌ಬಿ ಪದವಿಗೆ ದಾಖಲಾತಿಗೊಳ್ಳಲು ಅರ್ಹತೆ ಪಡೆಯುತ್ತಾರೆ. ಹಾಗೂ ದ್ವಿತೀಯ ಪಿಯುಸಿಯಲ್ಲಿ ವಾಣಿಜ್ಯ ಅಥವಾ ವಿಜ್ಞಾನ ಶಾಖೆಗಳನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಬಿಕಾಮ್ ಎಲ್‌ಎಲ್‌ಬಿ ಪ್ರವೇಶಾತಿಗೆ ಅರ್ಹರು.

ವಿಫುಲ ಅವಕಾಶಗಳು: ಹೊಸ ಕಾನೂನು ಮಹಾವಿದ್ಯಾಲಯದ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮೂಡುಬಿದಿರೆ ಹಾಗೂ ರಾಜ್ಯಕ್ಕೆ ಮತ್ತೊಂದು ಕೊಡುಗೆಯನ್ನು ನೀಡಲು ಸನ್ನದ್ಧವಾಗಿದೆ. ವಿಶಾಲವಾದ ಸುಸಜ್ಜಿತ ಕಾನೂನು ಗ್ರಂಥಾಲಯ, ಮೂಟ್ ಕೋರ್ಟ್ ಮತ್ತು ಇತರೆ ಎಲ್ಲಾ ಮೂಲಭೂತ ಸೌರ‍್ಯಗಳೊಂದಿಗೆ ವಿದ್ಯಾಗಿರಿಯಲ್ಲಿ ಕಾಲೇಜು ಈಗಾಗಲೇ ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾಗಿದೆ. ಶಿಕ್ಷಣ ಪೂರೈಸಿದ ಪದವೀಧರರು ನ್ಯಾಯವಾಧಿಗಳಾಗಿ ಸ್ವಂತ ವೃತ್ತಿ ಆರಂಭಿಸುವುದಲ್ಲದೇ, ವಿವಿಧ ಕಂಪೆನಿಗಳಲ್ಲಿ ಸಲಹೆಗಾರರಾಗಿ, ವ್ಯವಹಾರ ಆಡಳಿತಾಧಿಕಾರಿಗಳಾಗಿ, ನ್ಯಾಯಾಂಗದ ವಿವಿಧ ಹುದ್ದೆಗಳಲ್ಲಿ, ಶಾಸನ ರೂಪಿಸುವ ಪ್ರತಿನಿಧಿಗಳಾಗಿ ವೃತ್ತಿಕೈಗೊಳ್ಳುವ ಅಪಾರ ಅವಕಾಶಗಳಿವೆ. ಸಮಾಜಕರ‍್ಯ, ಪ್ರತಿಕೋದ್ಯಮ, ಎಂಬಿಎ, ಹಾಸ್ಪಿಟಲ್ ಅಡ್ಮೀನಿಸ್ಟ್ರೇಶನ್, ಸಿಎ, ಸಿಎಸ್ ಪದವೀಧರರು ಕಾನೂನು ಶಿಕ್ಷಣ ಪಡೆದಲ್ಲಿ ತಮ್ಮ ಕ್ಷೇತ್ರಗಳಲ್ಲಿ ಹೆಚ್ಚಿನ ನೈಪುಣ್ಯತೆ ಪಡೆಯುವುದರೊಂದಿಗೆ ಹೆಚ್ಚಿನ ಉದ್ಯೋಗದ ಅವಕಾಶಗಳನ್ನು ಪಡೆಯಲು ಸಹಕಾರಿಯಾಗಲಿದೆ.

ದಾಖಲಾತಿ ಆರಂಭಗೊಂಡಿದೆ: 2024-25 ಶೈಕ್ಷಣಿಕ ವರ್ಷದ ದಾಖಲಾತಿ ಈಗಾಗಲೇ ಆರಂಭಗೊಂಡಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9379525826 ಹಾಗೂ 8147760394 ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಸಿಎ, ಸಿಎಸ್, ಎಸಿಸಿಎ, ಸಿಎಮ್‌ಎಸ್ ಹಾಗೂ ಯುಪಿಎಸ್ಸಿ ಕೋರ್ಸಗಳಿಗೆ ತರಬೇತಿಯ ಜೊತೆಗೆ ದೇಶದ ವಿವಿಧ ಕಾನೂನು ವಿವಿಗಳಿಗೆ ಪ್ರವೇಶ ಪಡೆಯಲು ಬಯಸುವ ಆಕಾಂಕ್ಷಿಗಳಿಗಿರುವ ಅರ್ಹತಾ ಪರೀಕ್ಷೆಗೆ  ತರಬೇತಿ ನೀಡಲಾಗುತ್ತದೆ. ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪ್ರಾಚಾರ‍್ಯ ಡಾ. ಕುರಿಯನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!