Tuesday, July 28, 2026
Tuesday, July 28, 2026

ಡಿ.14 ರಿಂದ 17 ರವರೆಗೆ ‘ಆಳ್ವಾಸ್ ವಿರಾಸತ್’

ಡಿ.14 ರಿಂದ 17 ರವರೆಗೆ ‘ಆಳ್ವಾಸ್ ವಿರಾಸತ್’

Date:

ಮೂಡಬಿದಿರೆ, ನ.೮: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡಬಿದಿರೆಯು ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ವೈಭವದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್‌ಗೆ 29ನೇ ವರ್ಷವಾಗಿದ್ದು ಅಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ, ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಸಿದ್ಧತೆಯಲ್ಲಿ ತೊಡಗಿದ್ದು ‘ಆಳ್ವಾಸ್ ವಿರಾಸತ್ ೨೦೨೩’ ಅತ್ಯಂತ ಯಶಸ್ವಿ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ. ‘ಆಳ್ವಾಸ್ ವಿರಾಸತ್ ೨೦೨೩’ ಕ್ಕೆ ದಿನಾಂಕ ನಿಗದಿಯಾಗಿದ್ದು ಡಿಸೆಂಬರ್ 14 ರಂದು ಪ್ರಾರಂಭವಾಗಿ 17ರಂದು ಮುಕ್ತಾಯಗೊಳ್ಳಲಿದೆ. ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳು ಸೇರಿ ನಾಲ್ಕು ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು ಜರುಗಲಿದೆ.

ಪ್ರತಿದಿನ ಮುಸ್ಸಂಜೆ 6 ಗಂಟೆಗೆ ಪ್ರಾರಂಭವಾಗುವ ಈ ಉತ್ಸವವು ರಾತ್ರಿ 9.30ಕ್ಕೆ ಮುಕ್ತಾಯಗೊಳ್ಳುತ್ತವೆ. ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಆಳ್ವಾಸ್ ವಿರಾಸತ್ ಕಾರ್ಯಕ್ರಮಗಳು ನಡೆಯಲಿದೆ. ಇದು ಬೃಹತ್ ವೇದಿಕೆಯಿದಾಗಿದ್ದು, 50 ಸಾವಿರಕ್ಕಿಂತ ಹೆಚ್ಚಿನ ಪ್ರೇಕ್ಷಕರು ಕಣ್ತುಂಬಿಕೊಳ್ಳಲು ಅನುವಾಗುವಂಥಾ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ಡಿಸೆಂಬರ್ 14, 15, 16 ಮತ್ತು 17ನೇ ದಿನಾಂಕಗಳಂದು ನಾಲ್ಕು ದಿನಗಳ ಕಾಲ ನಡೆಯುವ ರಾಷ್ಟೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ 2023ಕ್ಕೆ ಸಂಸ್ಕೃತಿ ಪ್ರಿಯರೂ, ಕಲಾ ಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವದ ಯಶಸ್ಸಿಗೆ ಸಹಕರಿಸಬೇಕೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಅಧ್ಯಕ್ಷರಾದ ಡಾ| ಎಂ. ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!