Friday, February 27, 2026
Friday, February 27, 2026

ತುಳುವಿನಕೊಪ್ಪದಲ್ಲಿ ಅಪರೂಪದ ಸ್ಮಾರಕಶಿಲ್ಪಗಳು ಪತ್ತೆ

ತುಳುವಿನಕೊಪ್ಪದಲ್ಲಿ ಅಪರೂಪದ ಸ್ಮಾರಕಶಿಲ್ಪಗಳು ಪತ್ತೆ

Date:

ಕೊಪ್ಪ, ಜು.20: ತುಳುವಿನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಕೆರೆ ಪ್ರದೇಶದ ಕೆರೆಮನೆಯಲ್ಲಿ ಎರಡು ಅಪರೂಪದ ಸ್ಮಾರಕಶಿಲ್ಪಗಳು ಶಾಂತ ಶ್ರೀನಿವಾಸ ಗೌಡ ಮತ್ತು ಕೆರೆಮನೆ ಸುರೇಶ ಅವರ ಜಮೀನಿನಲ್ಲಿ ಕಂಡುಬಂದಿರುತ್ತವೆ. ಶಾಂತ ಶ್ರೀನಿವಾಸ ಗೌಡ ಅವರು ತಮ್ಮ ಜಮೀನಿನ ಕೆಲಸದ ಸಂದರ್ಭದಲ್ಲಿ ಒಂದು ಸ್ಮಾರಕಶಿಲ್ಪವನ್ನು ಹೊರತೆಗೆದು ಇದರ ಮಾಹಿತಿಯನ್ನು ಇತಿಹಾಸ ಮತ್ತು ಪುರಾತತ್ತ್ವ ಸಂಶೋಧನಾರ್ಥಿ ನ.ಸುರೇಶ ಕಲ್ಕೆರೆ ಅವರಿಗೆ ತಿಳಿಸಿರುತ್ತಾರೆ. ಈ ಸಂದರ್ಭದಲ್ಲಿ ಕ್ಷೇತ್ರಕಾರ್ಯ ಶೋಧನೆಗೆ ತೆರಳಿದ ಸಂಶೋಧನಾರ್ಥಿಗೆ ಕೆರೆಮನೆ ಸುರೇಶ ಅವರ ಜಮೀನಿನಲ್ಲಿಯೂ ಗಿಡ-ಗಂಟಿಗಳಿಂದ ಮುಚ್ಚಿ ಹೋಗಿದ್ದ ಇನ್ನೊಂದು ಸ್ಮಾರಕಶಿಲ್ಪವು ದೊರೆಯುತ್ತದೆ. ಇವುಗಳನ್ನು ಸ್ವಚ್ಛಗೊಳಿಸಿ, ಅಧ್ಯಯನಕ್ಕೆ ಒಳಪಡಿಸಿದಾಗ ಇವುಗಳು ಒಂದೇ ರೀತಿಯ ಸಾಮ್ಯತೆಯನ್ನು ಹೊಂದಿರುವುದು ತಿಳಿದುಬರುತ್ತದೆ.

ಈ ಸ್ಮಾರಕಶಿಲ್ಪಗಳು ಸುಮಾರು ಎರಡು ಅಡಿ ಎತ್ತರ ಹಾಗೂ ಒಂದು ಅಡಿ ಅಗಲವಾಗಿದ್ದು, ಇವುಗಳು ಒಂದಕ್ಕೊಂದು ಸುಮಾರು 300 ಮೀಟರ್ ಅಂತರದಲ್ಲಿದೆ. ಮುಖ್ಯವಾಗಿ ಈ ಸ್ಮಾರಕಶಿಲ್ಪದ ಮಧ್ಯಭಾಗದಲ್ಲಿ ತ್ರಿಶೂಲ ಹಾಗೂ ಇದರ ಇಕ್ಕೆಲಗಳಲ್ಲಿ ಸೂರ್ಯ ಮತ್ತು ಚಂದ್ರರ ಕೆತ್ತನೆಯಿದ್ದು, ಇಡೀ ಕೊಪ್ಪ ತಾಲೂಕಿನಲ್ಲಿಯೇ ಇವುಗಳು ಪ್ರಥಮವಾಗಿ ಕಂಡುಬಂದಿರುವ ಅಪರೂಪದ ಸ್ಮಾರಕಶಿಲ್ಪಗಳಾಗಿದೆ. ಈ ಶಿಲ್ಪ ಲಕ್ಷಣದ ಹೋಲಿಕೆಯನ್ನು ಹೊಂದಿರುವ 15ನೇ ಶತಮಾನದ ದಾನ ಶಾಸನವೊಂದು ಕಡಬ ತಾಲೂಕಿನ ಬಳ್ಪ ಪ್ರದೇಶದಲ್ಲಿನ ಶ್ರೀ ದುರ್ಗಾ ದೇವಾಲಯದ ಒಳ ಪ್ರಾಕಾರದಲ್ಲಿ ಕಂಡುಬರುತ್ತದೆ. ಆದರೆ ಇದರಲ್ಲಿ ಸೂರ್ಯ-ಚಂದ್ರರ ಬದಲು ಶಂಖ-ಚಕ್ರದ ಕೆತ್ತನೆಯನ್ನು ಕಾಣಬಹುದು.

ಕಲ್ಕೆರೆ ಪ್ರದೇಶದ ಅರಣ್ಯದಲ್ಲಿ ಕಲ್ಲಿನ ಪ್ರಾಚೀನ ತಳಪಾಯ ಕಂಡು ಬಂದಿದ್ದು, ಇದು ದೇವಿ ಸಂಬಂಧಿಸಿದ ದೇವಾಲಯದ ನೆಲೆಗಟ್ಟು ಎಂಬುದು ಇಂದಿಗೂ ಸ್ಥಳೀಯರ ನಂಬಿಕೆಯಾಗಿದೆ. ಪ್ರಸ್ತುತ ಅಧ್ಯಯನಕ್ಕೆ ಒಳಪಡಿಸಲಾದ ಈ ಸ್ಮಾರಕಶಿಲ್ಪಗಳು 14-15ನೇ ಶತಮಾನದಲ್ಲಿ ಹಾಕಿರಬಹುದಾದಂತಹ ಗಡಿಕಲ್ಲು ಆಗಿರಬಹುದೆಂದು ಸಂಶೋಧನಾರ್ಥಿಯು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಈ ಕ್ಷೇತ್ರಕಾರ್ಯದಲ್ಲಿ ತುಳುವಿನಕೊಪ್ಪ ಗ್ರಾಮ ಪಂಚಾಯತಿ ಉದ್ಯೋಗಿ ಮಹೇಶ್, ಕಲ್ಕೆರೆ ಸುಂದರ್ ರಾಜ್, ರಾಘವೇಂದ್ರ ಹಾಗೂ ಕಲ್ಕೆರೆ ಶಾಲೆಯ ವಿದ್ಯಾರ್ಥಿಗಳಾದ ಸನ್ನಿಧಿ ಮತ್ತು ವಿಕೃತ್ ಸಹಕಾರ ನೀಡಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!