Sunday, February 8, 2026
Sunday, February 8, 2026

ಬೆಳ್ಮಣ್ಣು ಅನುಬೆಳ್ಳೆ ಅವರ ’ಅಂಗಡಿ’ ಪುಸ್ತಕ ಲೋಕಾರ್ಪಣೆ

ಬೆಳ್ಮಣ್ಣು ಅನುಬೆಳ್ಳೆ ಅವರ ’ಅಂಗಡಿ’ ಪುಸ್ತಕ ಲೋಕಾರ್ಪಣೆ

Date:

ಉಡುಪಿ: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ನೇತೃತ್ವದಲ್ಲಿ ನಂದಳಿಕೆಯ ಫ್ರೆಂಡ್ಸ್ ಕ್ಲಬ್ಬಿನ ರಂಗಮಂದಿರದಲ್ಲಿ ಹಿರಿಯ ಸಾಹಿತಿ ಬೆಳ್ಮಣ್ಣು ಅನು ಬೆಳ್ಳೆ ಯವರ 51ನೇಯ ಕೃತಿ ’ಅಂಗಡಿ’ ಕಥಾ ಸಂಕಲನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಇಂದು ನಡೆಯಿತು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ನಿಕಟಪೂರ್ವಾಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಅವರು ಪುಸ್ತಕ ಲೋಕಾರ್ಪಣೆ ಮಾಡಿ ಶುಭ ಹಾರೈಸಿದರು.

ಸಮಾರಂಭದಲ್ಲಿ ಯುವ ಸಾಹಿತಿ ಬೋರುಗುಡ್ಡೆ ಇಂದುಚೇತನ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರು ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!