Sunday, October 11, 2026
Sunday, October 11, 2026

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಆಟಿಡೊಂಜಿ ದಿನ

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಆಟಿಡೊಂಜಿ ದಿನ

Date:

ಬೆಳ್ಮಣ್: ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಮತ್ತು ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಸಭಾಂಗಣದಲ್ಲಿ ಆದಿತ್ಯವಾರ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೋಳ ಉದಯ್ ಅಂಚನ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಜೇಸಿಐ ವಲಯ ಉಪಾಧ್ಯಕ್ಷ ಗಿರೀಶ್ ಎಸ್. ಪಿ. ಉದ್ಘಾಟಿಸಿದರು.

ಕೆದಿಂಜೆ ಶ್ರೀ ವಿದ್ಯಾಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾದ ಪ್ರಥ್ವೀರಾಜ್ ಬಲ್ಲಾಳ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ನಿಕಟ ಪೂರ್ವಾಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ಸ್ವಾಗತಿಸಿದರು. ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿಯವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ವಂದಿಸಿದರು. ಕಾರ್ಯಕ್ರಮದ ನಿರ್ದೇಶಕಿ ಅಶ್ವಿನಿ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಪುಷ್ಪ ಕುಲಾಲ್ ವೇದಿಕೆಯಲ್ಲಿದ್ದರು.

ನಂದಳಿಕೆ ಗ್ರಾಮ ಪಂಚಾಯತ್ ಸದಸ್ಯೆ ಪದ್ಮಶ್ರೀ ಪೂಜಾರಿ, ಬೋಳ ಗ್ರಾಮ ಪಂಚಾಯತ್ ಸದಸ್ಯ ರಘುವೀರ್ ಶೆಟ್ಟಿ, ಪೂರ್ವಾಧ್ಯಕ್ಷರಾದ ದಿನೇಶ್ ಪೂಜಾರಿ, ಸುರೇಶ್ ಪೂಜಾರಿ, ಉಪಾಧ್ಯಕ್ಷ ಪ್ರಶಾಂತ್ ಪೂಜಾರಿ, ಜೊತೆ ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಕೋಶಾಧಿಕಾರಿ ವೀಣಾ ಪೂಜಾರಿ ಉಪಸ್ಥಿತರಿದ್ದರು. ತುಳುನಾಡಿನ ಆಟಿ ತಿಂಗಳ 25ಕ್ಕೂ ಅಧಿಕ ಬಗೆಯ ತಿಂಡಿ-ತಿನಸುಗಳೊಂದಿಗೆ ಭೋಜನಕೂಟ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು, ಅ.11: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2026ರ ಮೈಸೂರು...

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...
error: Content is protected !!