ಮಣಿಪಾಲ: ಅಕ್ಟೋಬರ್ 10 ವಿಶ್ವಾದ್ಯಂತ ವಿಶ್ವ ಮಾನಸಿಕ ಆರೋಗ್ಯ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವ ಮಾನಸಿಕ ಆರೋಗ್ಯ ದಿನವು ಜಾಗತಿಕ ಮಾನಸಿಕ ಆರೋಗ್ಯ ಶಿಕ್ಷಣ, ಜಾಗೃತಿ ಮತ್ತು ಸಾಮಾಜಿಕ ಕಳಂಕದ ವಿರುದ್ಧ ವಕಾಲತ್ತು ನೀಡುವ ಅಂತರರಾಷ್ಟ್ರೀಯ ದಿನವಾಗಿದೆ. ಇದನ್ನು 1992 ರಲ್ಲಿ ಮೊದಲನೆಯದಾಗಿ ವರ್ಲ್ಡ್ ಫೆಡರೇಶನ್ ಫಾರ್ ಮೆಂಟಲ್ ಹೆಲ್ತ್ ನ ಅಡಿಯಲ್ಲಿ ಆಚರಿಸಲಾಯಿತು.
ವಿಶ್ವ ಮಾನಸಿಕ ಆರೋಗ್ಯ ದಿನದ ಒಟ್ಟಾರೆ ಉದ್ದೇಶವೆಂದರೆ ಪ್ರಪಂಚದಾದ್ಯಂತ ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಮಾನಸಿಕ ಆರೋಗ್ಯಕ್ಕೆ ಬೆಂಬಲವಾಗಿ ಪ್ರಯತ್ನಗಳನ್ನು ಸಜ್ಜುಗೊಳಿಸುವುದು.
ಇದರ ಅಂಗವಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯು ರೋಗಿಗಳು ಅವರ ಅವಲಂಬಿತರು ಮತ್ತು ಸಾರ್ವಜನಿಕರಿಗಾಗಿ ಜಾಗೃತಿ ಭಾಷಣ ಮತ್ತು ಮುಕ್ತ ಮಾತುಕತೆ ಕಾರ್ಯಕ್ರಮವನ್ನು ಆಯೋಜಿಸಿತು.
ಮನೋವೈದ್ಯಶಾಸ್ತ್ರ ವಿಭಾಗದ ಸಲಹೆಗಾರ ಡಾ. ಅಭಿರಾಮ್ ಪಿಎನ್ ಅವರು ಸಾಮಾನ್ಯ ಮಾನಸಿಕ ಆರೋಗ್ಯ ಅಸ್ವಸ್ಥತೆಗಳ ಬಗ್ಗೆ ಮತ್ತು ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಎ ಜೈನ್ ಅವರು ಮಾನಸಿಕ ಆರೋಗ್ಯ ಅಸ್ವಸ್ಥತೆಗಳ ನಿರ್ವಹಣೆಯ ಬಗ್ಗೆ ಮಾತನಾಡಿದರು.
ಈ ಕಾರ್ಯಕ್ರಮದಿಂದ 1000 ಕ್ಕೂ ಹೆಚ್ಚು ಜನರು ಪ್ರಯೋಜನ ಪಡೆದರು.