Sunday, January 19, 2025
Sunday, January 19, 2025

ಮಹಾ ಮಾನವತಾವಾದಿ ಬಸವಣ್ಣನವರ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಮಹಾ ಮಾನವತಾವಾದಿ ಬಸವಣ್ಣನವರ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ: ಸಮಾಜದಲ್ಲಿನ ಅಸಮಾನತೆ, ಮೂಡನಂಬಿಕೆಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಜನಸಾಮಾನ್ಯರಿಗೂ ಅರ್ಥವಾಗುವಂತೆ, ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣನವರು ವಚನಗಳ ಮೂಲಕ ನೀಡಿದ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಲೋಕದ ಡೊಂಕ ನೀವೇಕೆ ತಿದ್ದುವರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ ಎಂಬ ಬಸವಣ್ಣ ಅವರ ವಚನದಂತೆ, ಪ್ರತಿಯೊಬ್ಬರೂ ತಮ್ಮ ಅಂತರಂಗ ಮತ್ತು ಬಹಿರಂಗ ಶುದ್ದಿಯೊಂದಿಗೆ ದೈನಂದಿನ ಕರ್ತವ್ಯಗಳನ್ನು ನಿರ್ವಹಿಸಬೇಕು. ವೇದವನ್ನು ಓದಿದವರು ದೊಡ್ಡವರಲ್ಲ, ಜನರ ವೇದನೆಯನ್ನು ಓದಿದವರು ದೊಡ್ಡವರು ಎಂಬ ಸಂದೇಶದಂತೆ, ಜಿಲ್ಲೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ದಿನನಿತ್ಯ ತಮ್ಮ ಕಚೇರಿಗೆ ಆಗಮಿಸುವ ಸಾರ್ವಜನಿಕರ ಸಮಸ್ಯೆಗಳನ್ನು ಅರಿತು ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ದೈನಂದಿನ ಬದುಕಿನಲ್ಲಿ ಬಸವಣ್ಣ ಅವರ ವಚನಗಳ ಸಂದೇಶಗಳನ್ನು ಎಲ್ಲರೂ ಪಾಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ನಾಡೋಜ ಕೆ.ಪಿ.ರಾವ್, ಬಸವಣ್ಣ ಅವರಲ್ಲಿದ್ದ ಮನೋ ನೈರ್ಮಲ್ಯ ಮತ್ತು ಸಮದೃಷ್ಠಿ ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದೆ. ಅನುಭವ ಮಂಟಪದ ಮೂಲಕ ಚರ್ಚೆಗಳನ್ನು ನಡೆಸಿ, ಸರಳವಾದ ಭಾಷೆಯಲ್ಲಿ ಜನಸಾಮಾನ್ಯರಿಗೆ ಸಂದೇಶಗಳನ್ನು ನೀಡಿದ ಬಸವಣ್ಣನವರ ಜನನ ಭುವನದ ಭಾಗ್ಯ ಎಂದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಅಪರ ಜಿಲ್ಲಾಧಿಕಾರಿ ವೀಣಾ, ಉಡುಪಿ ತಹಸೀಲ್ದಾರ್ ಅರ್ಚನಾ ಭಟ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಉಡುಪಿ ಚಿತ್ರಕಲಾ ಮಂದಿರದ ಪ್ರಾಂಶುಪಾಲ ನಿರಂಜನ್, ಜಿಲ್ಲಾ ಬಸವ ಸಮಿತಿ ಉಪಾಧ್ಯಕ್ಷ ಸೋಮನಾಥ್, ಕಾರ್ಯದರ್ಶಿ ಸುರೇಶ್, ವಿವಿಧ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಕಲಾವಿದ ಶಂಕರದಾಸ್ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!