ಮಲ್ಪೆ: ಮುನಿಯಾಲು ಆಯುರ್ವೇದ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಮಲ್ಪೆ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಬಿ ಅತಿಥಿಗಳನ್ನು ಸ್ವಾಗತಿಸಿ ಸ್ವಚ್ಛ ಭಾರತ ಕಾರ್ಯಕ್ರಮವು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಯನ್ನು ಅಳವಡಿಸಿಕೊಳ್ಳಲು ಸಾರ್ವಜನಿಕರನ್ನು ಪ್ರೇರೇಪಿಸುತ್ತದೆ ಎಂದು ಹೇಳಿದರು.
ಮಹಾತ್ಮ ಗಾಂಧಿ ಪ್ರತಿಮೆಗೆ ಅತಿಥಿಗಳು ಹಾಗೂ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಎನ್.ಎಸ್.ಎಸ್ ಸ್ವಯಂಸೇವಕರು ‘ವೈಷ್ಣವ್ ಜನತೋ’ ಹಾಡಿದರು.
ಮುಖ್ಯ ಅತಿಥಿಯಾದ ಉಡುಪಿ ನಗರಸಭೆಯ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಸಾಲಿಯಾನ್ ಸ್ವಚ್ಛ್ ಭಾರತ ಅಭಿಯಾನದ ಕುರಿತು ಮಾತನಾಡಿ, ಸಾರ್ವಜನಿಕ ನೈರ್ಮಲ್ಯ ಮತ್ತು ದೇಶದ ಸ್ವಚ್ಛತೆಯನ್ನು ಕಾಪಾಡುವಲ್ಲಿ ನಾಗರಿಕನ ಮೂಲಭೂತ ಕರ್ತವ್ಯದ ಬಗ್ಗೆ ಒತ್ತು ನೀಡಿದರು.
ಮಲ್ಪೆ ಸೆಂಟ್ರಲ್ ವಾರ್ಡ್ ನ ಸದಸ್ಯರಾದ ಎಡ್ಲಿನಾ ಕರ್ಕಡ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಸುದೀಪ ಮತ್ತು ಆಡಳಿತಾಧಿಕಾರಿ ಯೋಗೀಶ್ ಶೆಟ್ಟಿ ಉಪಸ್ಥಿತರಿದ್ದರು.
ಎನ್ ಎಸ್ ಎಸ್ ಸ್ವಯಂಸೇವಕರಾದ ದೀಕ್ಷಾ, ಸಹನಾ ಆಚಾರ್ಯ ಮತ್ತು ಮಿಥಾಲಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಉಪನ್ಯಾಸಕರು ಮತ್ತು 60 ಎನ್ಎಸ್ಎಸ್ ಸ್ವಯಂಸೇವಕರು ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ 50 ಚೀಲ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿದರು.