ಬೆಳ್ಮಣ್ಣು: ಇತಿಹಾಸ ಪ್ರಸಿದ್ದ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಂಡಲ ಪೂಜಾ ಮಹೋತ್ಸವವು ಜನವರಿ 3 ರಂದು ಸೋಮವಾರ ಶ್ರೀ ಕ್ಷೇತ್ರದಲ್ಲಿ ಜರಗಲಿದೆ.
ಜನವರಿ 3 ರಂದು ಸೋಮವಾರ ಬೆಳಿಗ್ಗೆ ಗಂಟೆ 5.30ಕ್ಕೆ ಪಂಚಾಮೃತಾಭಿಷೇಕ, ನವಕ ಕಲಶಾಭಿಷೇಕ, ಬೆಳಿಗ್ಗೆ ಗಂಟೆ 6.30ಕ್ಕೆ ಅಲಂಕಾರ ಪೂಜೆ, ಬೆಳಿಗ್ಗೆ ಗಂಟೆ 7.00ರಿಂದ ತುಲಾಭಾರ ಸೇವೆ, ಬೆಳಿಗ್ಗೆ ಗಂಟೆ 11.30ಕ್ಕೆ ಮಹಾಪೂಜೆ, ಮಧ್ಯಾಹ್ನ ಗಂಟೆ 12.00ಕ್ಕೆ ಮಂಡಲ ಪೂಜೆ, ಉತ್ಸವ ಬಲಿ, ಪಲ್ಲ ಪೂಜೆ, ಮಧ್ಯಾಹ್ನ 1.00ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6.00ರಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಖ್ಯಾತ ಸಂಗೀತ ಗಾಯಕರಿಂದ ಸಂಗೀತ ಗಾನ ಸಂಭ್ರಮ ಕಾರ್ಯಕ್ರಮ ಜರಗಲಿದೆ.
ರಾತ್ರಿ ಗಂಟೆ 9.00ರಿಂದ ಪ್ರಸನ್ನ ಪೂಜೆ, ಉತ್ಸವ ಬಲಿ ಹಾಗೂ ರಂಗಪೂಜೆ ಜರಗಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ವೇದಮೂರ್ತಿ ಬಿ.ಎಂ.ಕೃಷ್ಣ ಭಟ್ ಮತ್ತು ವೇದಮೂರ್ತಿ ಬಿ.ಕೆ.ವಿಘ್ನೇಶ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.