Monday, February 24, 2025
Monday, February 24, 2025

ಜ್ಞಾನಸುಧಾ: ಭಜನಾಸುಧಾ, ವೀರ ಯೋಧರ ಸಂಸ್ಮರಣೆ

ಜ್ಞಾನಸುಧಾ: ಭಜನಾಸುಧಾ, ವೀರ ಯೋಧರ ಸಂಸ್ಮರಣೆ

Date:

ಕಾರ್ಕಳ: ಶ್ರೀ ಮಹಾಗಣಪತಿ ದೇವಸ್ಥಾನ, ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದೇವಸ್ಥಾನವು ನವೀಕರಣಗೊಂಡ ಪ್ರಯುಕ್ತ ಹಾಗೂ ಇತ್ತೀಚೆಗೆ ಹುತಾತ್ಮರಾದ ವೀರಯೋಧರ ಸಂಸ್ಮರಣೆಯೊಂದಿಗೆ ಅಹೋರಾತ್ರಿ ಭಜನಾ ಸುಧಾ ಕಾರ್ಯಕ್ರಮ ನಡೆಯಿತು.

ಗುಜರಾತಿನ ಶಶಿ ಕೆಟರರ್ಸ್ ಮ್ಯಾನೆಜಿಂಗ್ ಡೈರಕ್ಟರ್ ಶಶಿಧರ್ ಶೆಟ್ಟಿ ದೀಪ ಪ್ರಜ್ವಲನ ಮಾಡುವ ಮೂಲಕ ಚಾಲನೆ ನೀಡಿದರು. ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ದೀಪ ವಿಸರ್ಜನೆ: ಡಿಸೆಂಬರ್ 24ರ ಮುಂಜಾನೆ 7ಗಂಟೆಗೆ ಪ್ರಾರಂಭಗೊಂಡ ಭಜನಾಸುಧಾವು 25 ರ ಬೆಳಗ್ಗೆ 7 ಗಂಟೆಗೆ ಹುತಾತ್ಮರಾದ ವೀರಯೋಧರಿಗೆ ಪುಷ್ಪಾರ್ಚನೆಗೈದು, ದೀಪವಿಸರ್ಜನೆಯ ಮೂಲಕ ಭಜನಾಸುಧಾ ಕಾರ್ಯಕ್ರಮ ಸಮಾಪನಗೊಂಡಿತು.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಭಜನಾ ಕಾರ್ಯಕ್ರಮ ನೆರವೇರಲು ಸಹಕರಿಸಿದ ಎಲ್ಲರಿಗೂ ವಂದಿಸಿದರು. ಅಹೋರಾತ್ರಿ ನಡೆದ ಭಜನಾ ಸುಧಾದಲ್ಲಿ ಸುಮಾರು ೧೮ ಭಜನಾ ಮಂಡಳಿಗಳು ಪಾಲ್ಗೊಂಡಿದ್ದವು.

ಕಾರ್ಯಕ್ರಮದಲ್ಲಿ ಟ್ರಸ್ಟಿ ಕರುಣಾಕರ್ ಶೆಟ್ಟಿ, ಮಹಾಗಣಪತಿ ಭಜನಾ ಮಂಡಳಿ ಅಧ್ಯಕ್ಷ ಕಮಲಾಕ್ಷ ನಾಯಕ್, ಎಪಿಜಿಇಟಿ ಆಡಳಿತ ಮಂಡಳಿ ಸದಸ್ಯ ಅನಿಲ್ ಕುಮಾರ್ ಜೈನ್, ತ್ರಿವಳಿ ಸಂಸ್ಥೆಗಳ ಪ್ರಾಂಶುಪಾಲರುಗಳಾದ ದಿನೇಶ್ ಎಂ.
ಕೊಡವೂರು, ಗಣೇಶ್ ಶೆಟ್ಟಿ, ಉಷಾರಾವ್ ಯು., ಉಪಪ್ರಾಂಶುಪಾಲರುಗಳಾದ ಸಾಹಿತ್ಯ, ಸಂತೋಷ್, ವಾಣಿ ಕೆ., ಪಿಆರ್‌ಒ ಜ್ಯೋತಿ ಪದ್ಮನಾಭ ಭಂಡಿ, ಸಂಸ್ಥೆಯ ಹಿತೈಷಿಗಳಾದ ತ್ರಿವಿಕ್ರಮ ಕಿಣಿ, ದೇವೇಂದ್ರ ನಾಯಕ್ ಉಪಸ್ಥಿತರಿದ್ದರು.

ಜ್ಞಾನಸುಧಾ ಪ್ರೌಢಶಾಲಾ ಹಾಗೂ ಪಿಯು ವಿಭಾಗದ ಎನ್‌ಸಿಸಿ ಕೆಡೆಟ್‌ಗಳು ಹಾಗೂ ಪಿಯು ವಿಭಾಗದ ಎನ್.ಎಸ್.ಎಸ್ ವಿದ್ಯಾರ್ಥಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...
error: Content is protected !!