Home ಸುದ್ಧಿಗಳು ಪ್ರಾದೇಶಿಕ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಭಜನಾ ಕಾರ್ಯಕ್ರಮ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಭಜನಾ ಕಾರ್ಯಕ್ರಮ

902
0

ಬೆಳ್ಮಣ್: ಇತಿಹಾಸ ಪ್ರಸಿದ್ಧ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನವರಾತ್ರಿ ಮಹೋತ್ಸವದ ಅಂಗವಾಗಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ
ನೇತೃತ್ವದಲ್ಲಿ 15ನೇ ವರ್ಷದ ಕುಣಿತ ಭಜನಾ ಕಾರ್ಯಕ್ರಮ ಬೆಳ್ಮಣ್ಣು ಶ್ರೀ ಕ್ಷೇತ್ರದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಭಜನ ಮಂಡಳಿಯ ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಸತೀಶ್ ಪೂಜಾರಿ ಅಬ್ಬನಡ್ಕ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಹರೀಶ್ ಪೂಜಾರಿ, ಅಬ್ಬನಡ್ಕ ಶ್ರೀ ವನದುರ್ಗಾ ಸ್ವಸಹಾಯ ಸಂಘದ ಅಧ್ಯಕ್ಷೆ ಲಲಿತಾ ಆಚಾರ್ಯ, ಜೊತೆ ಕಾರ್ಯದರ್ಶಿ ಪುಷ್ಪ ಕುಲಾಲ್, ಕೋಶಾಧಿಕಾರಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸದಸ್ಯರಾದ ಆರತಿ ಕುಮಾರಿ, ಪದ್ಮಶ್ರೀ ಪೂಜಾರಿ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.