ಬ್ರಹ್ಮಾವರ: ಬಿಲ್ಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಬಿಲ್ಲಾಡಿ ದೊಡ್ಮನೆ ಬಿ. ರತ್ನಾಕರ ಶೆಟ್ಟಿಯವರು ನವೆಂಬರ್ 25 ಗುರುವಾರದಂದು ನಿಧನರಾದರು. ಮೃತರು ಬಿಲ್ಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ, ಸೇರಿದಂತೆ ಇಬ್ಬರು ಪುತ್ರರು, ಪುತ್ರಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.
ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಇಂಡಿಯನ್ ಬಂಟ್ಸ್ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಕೆ.ಸಿ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು ಅಂತಿಮ ನಮನ ಸಲ್ಲಿಸಿದರು.