ಬಿಲ್ಲಾಡಿ ಗ್ರಾಮ ಪಂಚಾಯತ್ ಇದರ ಕೋವಿಡ್ ಕಾರ್ಯಪಡೆ ಸಭೆ ನಡೆಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗ್ರಾಮದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಾರ್ಯಸಭೆ ಕೈಗೊಂಡ ಕ್ರಮಗಳ ಕುರಿತು ವಿಸ್ತ್ರತ ಚರ್ಚೆ ನಡೆಸಿದರು. ಸೋಂಕು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಅನಗತ್ಯ ಸಂಚಾರಕ್ಕೆ ಸ್ವ ಇಚ್ಛೆಯಿಂದ ಕಡಿವಾಣ ಹಾಕಬೇಕು ಎಂದು ಸಚಿವರು ಹೇಳಿದರು.
ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಪ್ರಾಸ್ಥಾವಿಕವಾಗಿ ಮಾತನಾಡಿದರು. ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ, ಕಂದಾಯ ನಿರೀಕ್ಷಕ ರಾಜು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎಚ್.ವಿ ಇಬ್ರಾಹಿಮ್ ಪುರ್, ಕೋಟ ಪೋಲಿಸ್ ಠಾಣಾಧಿಕಾರಿ ಸಂತೋಷ್, ಆವರ್ಸೆ ಪ್ರಾಥಮಿಕ ಕೇಂದ್ರ ವೈದ್ಯಾಧಿಕಾರಿ ಸವಿತಾ ಕುಂದರ್, ಅಭಿವೃದ್ಧಿ ಅಧಿಕಾರಿ ಪ್ರಶಾಂತ್, ಗ್ರಾಮ ಲೆಕ್ಕಿಗ ಶರತ್ ಶೆಟ್ಟಿ, ವಿಜಯ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯರಾದ ಅರುಣ್ ಶೆಟ್ಟಿ, ವೆಂಕಪ್ಪ ಕುಲಾಲ್, ಅಮರ್ ಶೆಟ್ಟಿ, ರವಿ ಆಚಾರ್ಯ, ಶಕುಂತಲಾ, ಸರಸ್ವತಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಕಾರ್ಯಪಡೆ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.