Sunday, October 4, 2026
Sunday, October 4, 2026

ಕಾಪು ಪುರಸಭಾ ಚುನಾವಣೆಗೆ ಬಿಜೆಪಿ ಪೂರ್ವತಯಾರಿ ಸಭೆ

ಕಾಪು ಪುರಸಭಾ ಚುನಾವಣೆಗೆ ಬಿಜೆಪಿ ಪೂರ್ವತಯಾರಿ ಸಭೆ

Date:

ಕಾಪು ಪುರಸಭಾ ಚುನಾವಣೆ ಹಾಗೂ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಬಗ್ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅಲೆವೂರು ಅಧ್ಯಕ್ಷತೆಯಲ್ಲಿ ಕಾಪುವಿನಲ್ಲಿ ಸಭೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ಪುರಸಭಾ ಚುನಾವಣಾ ಪೂರ್ವ ತಯಾರಿಯ ಬಗ್ಗೆ ಹಾಗೂ ಬೂತ್ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾಗಿರುವ ಅಗತ್ಯ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮುಂದಿನ ಚುನಾವಣೆಯನ್ನು ಗೆಲ್ಲುವ ಕುರಿತ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಮಹಾ ಶಕ್ತಿಕೇಂದ್ರ ಅಧ್ಯಕ್ಷ ಸಂದೀಪ್ ಶೆಟ್ಟಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ‌ ಶೆಟ್ಟಿ, ಕಾಪು ಪುರಸಭಾ ಉಸ್ತುವಾರಿ ಮಾಲಿನಿ ಶೆಟ್ಟಿ, ಬೂತ್ ಅಧ್ಯಕ್ಷರುಗಳು, ಪುರಸಭಾ ಮಾಜಿ ಸದಸ್ಯರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!