ಮಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ಹಾಗೂ ಉಚಿತ ಕೋವಿಡ್ ಲಸಿಕಾ ಶಿಬಿರ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಶಿಬಿರವನ್ನು ಭಾಜಪಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಉದ್ಘಾಟಿಸಿದರು. ನೂರಕ್ಕಿಂತಲೂ ಹೆಚ್ಚು ನಾಗರಿಕರು ರಕ್ತದಾನ ಮಾಡಿದರು. 450 ಕ್ಕಿಂತಲೂ ಮಿಕ್ಕಿ ಸಾರ್ವಜನಿಕರು ಉಚಿತ ಕೋವಿಡ್ ಲಸಿಕೆಯನ್ನು ಪಡೆದರು. ಶಿಬಿರದಲ್ಲಿ ನಾಗರಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಹನುಮಂತ್ ಕಾಮತ್, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.



