Saturday, September 21, 2024
Saturday, September 21, 2024

ಶುಭಲಕ್ಷ್ಮೀ ಆರ್. ನಾಯಕ್ ಕೃತಿ ಲೋಕಾರ್ಪಣೆ

ಶುಭಲಕ್ಷ್ಮೀ ಆರ್. ನಾಯಕ್ ಕೃತಿ ಲೋಕಾರ್ಪಣೆ

Date:

ಬೆಳ್ಮಣ್: ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ನೇತೃತ್ವದಲ್ಲಿ ಶುಭಲಕ್ಷ್ಮೀ ಆರ್. ನಾಯಕ್ ಅವರ “ಬೆಸುಗೆ ಇದ್ದರೆ ವಸುಧೆ” ಕವನ ಸಂಕಲನ ಕೃತಿ ಲೋಕಾರ್ಪಣೆ ಸಮಾರಂಭ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಂಗಮಂದಿರದಲ್ಲಿ ಜರಗಿತು.

ಉಡುಪಿ ಜಿಲ್ಲೆ ಕಸಾಪ ನಿಕಟಪೂರ್ವ ಜಿಲ್ಲಾಧ್ಯಕ್ಷ ಹಾಗೂ ಸಾಹಿತಿ ನೀಲಾವರ ಸುರೇಂದ್ರ ಅಡಿಗ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಬೆಳ್ಮಣ್ಣು ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ಸಾಹಿತಿಗಳಾದ ಡಾ. ಬಿ. ಜನಾರ್ದನ ಭಟ್ ಕೃತಿ ಲೋಕಾರ್ಪಣೆ ಮಾಡಿದರು.

ಲಯನ್ಸ್ ಜಿಲ್ಲಾ ನಿಕಟಪೂರ್ವ ಜಿಲ್ಲಾ ಗವರ್ನರ್ ಎನ್. ಎಂ. ಹೆಗ್ಡೆ, ಕಾರ್ಕಳ ತಾಲೂಕು ಕಸಾಪ ನಿಕಟ ಪೂರ್ವಾಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಮೀನಕಳಿಯ ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ನಿರಂಜನ್ ವಿ. ನಾಯಕ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಕೃತಿ ರಚನೆಕಾರರಾದ ಶುಭಲಕ್ಷ್ಮೀ ಆರ್. ನಾಯಕ್, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಕಾರ್ಯದರ್ಶಿ ಕಾಸ್ರಬೈಲು ಸುರೇಶ್ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಉಪಸ್ಥಿತರಿದ್ದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಸ್ವಾಗತಿಸಿ, ನಿಕಟಪೂರ್ವ ಕಾರ್ಯದರ್ಶಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ವಂದಿಸಿದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ
ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!