Sunday, January 19, 2025
Sunday, January 19, 2025

ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

Date:

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳ ಸುಮಾರು 446 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.

ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿರುತ್ತದೆ.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಸಕ್ತ ಸಾಲಿನ ಆಗಸ್ಟ್ ತಿಂಗಳಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಕಡಾ 50% ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‌ಸೈಟ್ http://www.kannadapustakapradhikara.com ನಲ್ಲಿ ಕೂಡ ಶೇ.50 ರಿಯಾಯಿತಿ ಲಭ್ಯವಿದ್ದು, ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ ಆನ್‌ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!