ಉಡುಪಿ: ಬ್ರಹ್ಮಾವರ ತಾಲೂಕು ಕೋಡಿ ಕನ್ಯಾನ ಗ್ರಾಮದ ನಿವಾಸಿ ಮೊಹಮ್ಮದ್ ನಿಶಾನ್ (14) ಎಂಬ ಬಾಲಕನು ನವೆಂಬರ್ 28 ರಂದು ಬೆಳಗ್ಗೆ ಮಕ್ಕಳ ಜೊತೆ ಆಟ ಆಡಿ ಬರುವುದಾಗಿ ಹೇಳಿ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 4.5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಮತ್ತು ಬ್ಯಾರಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2564155, 9480805454, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2561966, 9480805432 ಗೆ ಮಾಹಿತಿ ನೀಡುವಂತೆ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

