Tuesday, February 25, 2025
Tuesday, February 25, 2025

ದೇಶ ಸ್ವಾವಲಂಬಿ ಹಾಗೂ ಹೊಸ ದಿಕ್ಕಿನತ್ತ ಸಾಗುತ್ತಿರುವುದರ ಸಂಕೇತವನ್ನು ಬಜೆಟ್ ನೀಡಿದೆ: ಶಾಸಕ ವೇದವ್ಯಾಸ್ ಕಾಮತ್

ದೇಶ ಸ್ವಾವಲಂಬಿ ಹಾಗೂ ಹೊಸ ದಿಕ್ಕಿನತ್ತ ಸಾಗುತ್ತಿರುವುದರ ಸಂಕೇತವನ್ನು ಬಜೆಟ್ ನೀಡಿದೆ: ಶಾಸಕ ವೇದವ್ಯಾಸ್ ಕಾಮತ್

Date:

ಮಂಗಳೂರು, ಫೆ.1: ದೇಶ ಚುನಾವಣೆಯ ಹೊಸ್ತಿಲಲ್ಲಿದ್ದರೂ ಯಾವುದೇ ಓಲೈಕೆಯ ಘೋಷಣೆಗಳಿಲ್ಲದ ಭವ್ಯ ಭಾರತದ ಭವಿಷ್ಯದ ದೃಷ್ಟಿಯಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರದ ಮಧ್ಯಂತರ ಬಜೆಟ್ ಭಾರತವೀಗ ಸ್ವಾವಲಂಬಿ ಹಾಗೂ ಹೊಸ ದಿಕ್ಕಿನತ್ತ ಸಾಗುತ್ತಿರುವುದರ ಸಂಕೇತ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು.

ಇದು ದೇಶದ ಭರವಸೆಯ ಬಜೆಟ್ ಆಗಿದ್ದು ಬಿಜೆಪಿ ಸರ್ಕಾರದ ಮುಖ್ಯ ಗುರಿಯೇ ದೇಶದ ಮೂಲಭೂತ ಸೌಕರ್ಯದ ಅಭಿವೃದ್ಧಿ. ಆ ನಿಟ್ಟಿನಲ್ಲಿ ಕೇಂದ್ರದ ಮೋದಿ ಸರ್ಕಾರವು ದೇಶವನ್ನು ಕೊಂಡೊಯ್ಯುತ್ತಿದೆ. ಪಿಎಂ ಆವಾಸ್ ಯೋಜನೆಯಡಿ ಮುಂದಿನ 5 ವರ್ಷಗಳಲ್ಲಿ 3 ಕೋಟಿ ಮನೆ ನಿರ್ಮಾಣದ ಗುರಿಯನ್ನು ಹಾಕಿಕೊಂಡಿದ್ದು ಬಡವರ ಸ್ವಂತ ಸೂರಿನ ಕನಸು ನನಸಾಗಲಿದೆ. ಆಶಾ-ಅಂಗನವಾಡಿ, ಕಾರ್ಯಕರ್ತೆಯರಿಗೆ, ಸಹಾಯಕರಿಗೂ ಆಯುಷ್ಮಾನ್ ಯೋಜನೆ ವಿಸ್ತರಣೆ ಮಾಡಲಾಗಿದೆ. ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಮಾಡದೆ ಈ ಹಿಂದಿನ ಸ್ಥಿತಿಯನ್ನೇ ಅನುಸರಿಸಿದ್ದು ಮಧ್ಯಮ ವರ್ಗಕ್ಕೆ ಅನುಕೂಲಕರವಾಗಲಿದೆ ಎಂದರು.

ಪಿಎಂ ಗತಿಶಕ್ತಿ ಮೂಲಕ ಮೂರು ಪ್ರಮುಖ ರೈಲ್ವೆ ಕಾರಿಡಾರ್ ಗಳ ನಿರ್ಮಾಣದ ಗುರಿ, ದೇಶದ ಎಲ್ಲಾ ನಗರಗಳಿಗೂ ಮೆಟ್ರೋ ಯೋಜನೆಗಳನ್ನು ವಿಸ್ತರಿಸುವ ಯೋಜನೆ, ಪ್ರವಾಸೋದ್ಯಮ ವಲಯಕ್ಕೆ ಹೆಚ್ಚಿನ ಉತ್ತೇಜನ, ಒಂದು ಕೋಟಿ ಮನೆಗಳ ಮೇಲೆ ಸೋಲಾರ್ ಅಳವಡಿಕೆ, ರಸ್ತೆ-ರೈಲು-ಬಂದರುಗಳ ಕಾರಿಡಾರ್ ನಿರ್ಮಾಣ, ಡೈರಿಗಳಿಗೆ ರಾಷ್ಟ್ರೀಯ ಗೋಕುಲ್ ಮಿಷನ್ ನಡಿ ಪ್ರೋತ್ಸಾಹ ಹೀಗೆ, ಮಹಿಳೆಯರು, ರೈತರು, ಯುವ ಜನಾಂಗ ಸೇರಿದಂತೆ ಎಲ್ಲಾ ವರ್ಗದ ಜನರನ್ನೂ ಈ ಮಧ್ಯಂತರ ಬಜೆಟ್ ನಲ್ಲಿ ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದರು.

ಕಳೆದ ಹತ್ತು ವರ್ಷಗಳಲ್ಲಿ ಭಾರತವು ವಿಶ್ವದ ಆರ್ಥಿಕತೆಗೆ ಸವಾಲೊಡ್ದುವತ್ತ ದಾಪುಗಾಲಿಟ್ಟಿದೆ. ನನ್ನ ಮೂರನೇ ಅವಧಿಯಲ್ಲಿ ಜಗತ್ತಿನ ಮೂರು ಅತಿದೊಡ್ಡ ಆರ್ಥಿಕತೆಯಲ್ಲಿ ಭಾರತವೂ ಒಂದಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರೇ ಹೇಳಿದ್ದು ಆ ದಿನಗಳೂ ಸಹ ದೂರವಿಲ್ಲ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!