Friday, October 18, 2024
Friday, October 18, 2024

ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಿದ ಬಜೆಟ್: ಯಶ್ಪಾಲ್ ಸುವರ್ಣ

ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಿದ ಬಜೆಟ್: ಯಶ್ಪಾಲ್ ಸುವರ್ಣ

Date:

ಉಡುಪಿ, ಜು.23: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಿರ್ಮಲ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ದೇಶದ ಆರ್ಥಿಕ ವ್ಯವಸ್ಥೆಗೆ ಹೊಸಚೈತನ್ಯ ತುಂಬುವ ಮೂಲಕ ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ. ಮಹಿಳಾ ಸಬಲೀಕರಣಕ್ಕೆ 3 ಲಕ್ಷ ಕೋಟಿ ಅನುದಾನ ಮೀಸಲಿರಿಸಿದ್ದು, ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, ಸಹಕಾರ ಕ್ಷೇತ್ರವನ್ನು ಸಧೃಡಗೊಳಿಸುವ ನಿಟ್ಟಿನಲ್ಲಿ ರಾಷ್ಟೀಯ ಸಹಕಾರ ನೀತಿಯನ್ನು ಜಾರಿಗೊಳಿಸಲು ಮುಂದಾಗಿದೆ.

ಆದಾಯ ತೆರಿಗೆ ಮಿತಿ ಹೆಚ್ಚಳ, ಕೃಷಿ ಅಭಿವೃದ್ದಿಗೆ ಪೂರಕ ಕಾರ್ಯಕ್ರಮ, ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, 12 ಹೊಸ ಇಂಡಸ್ಟ್ರಿಯಲ್ ಪಾರ್ಕ್ ನಿರ್ಮಾಣದ ಮೂಲಕ ಕೈಗಾರಿಕೆಗಳಿಗೆ ಪ್ರೋತ್ಸಾಹ, ಮುದ್ರಾ ಯೋಜನೆಯ ಸಾಲದ ಮಿತಿಯನ್ನು 20 ಲಕ್ಷಕ್ಕೆ ಏರಿಕೆ ಮಾಡುವ ಮೂಲಕ ದೇಶದ ಆರ್ಥಿಕತೆಯ ಸಮಗ್ರ ಪ್ರಗತಿಗೆ ಹೊಸ ಭಾಷ್ಯ ಬರೆದಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಆರ್ಥಿಕತೆಯಲ್ಲಿ ವಿಶ್ವದ ಪ್ರಬಲ ಆರ್ಥಿಕ ವ್ಯವಸ್ಥೆಗೆ ಮುಂದಡಿಯಿಡುವ ಸಂಕಲ್ಪಕ್ಕೆ ಈ ಬಾರಿಯ ಬಜೆಟ್ ಪೂರಕವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು, ಅ.೧೮: ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ...
error: Content is protected !!